Home » ನಿಯಂತ್ರಣ ತಪ್ಪಿದ ಲಾರಿ ರಸ್ತೆ ಮಧ್ಯೆಯೇ ಪಲ್ಟಿ
 

ನಿಯಂತ್ರಣ ತಪ್ಪಿದ ಲಾರಿ ರಸ್ತೆ ಮಧ್ಯೆಯೇ ಪಲ್ಟಿ

by Kundapur Xpress
Spread the love

ಉಡುಪಿ: ಚಾಲಕನೊಬ್ಬ ಕುಡಿದ ಮತ್ತಿನಲ್ಲಿ ಅಪಾಯಕಾರಿ ರೀತಿಯಲ್ಲಿ ಲಾರಿಯನ್ನು ಚಲಾಯಿಸಿಕೊಂಡು ಹೋದ ಪರಿಣಾಮ ನಿಯಂತ್ರಣ ತಪ್ಪಿದ ಲಾರಿ ರಸ್ತೆ ಮಧ್ಯೆಯೇ ಪಲ್ಟಿಯಾದ ಘಟನೆ ಹಿರಿಯಡಕ ಗುಡ್ಡೆಅಂಗಡಿ ಬಳಿ ಸಂಭವಿಸಿದೆ.

ಚಾಲಕನೊಬ್ಬ ಲಾರಿಯನ್ನು ಹಿರಿಯಡಕದಿಂದ ಕಾರ್ಕಳ ಕಡೆಗೆ ಅತೀ ವೇಗವಾಗಿ ಅಪಾಯಕಾರಿ ರೀತಿಯಲ್ಲಿ ಅಡ್ಡಾದಿಡ್ಡಿಯಾಗಿ ಚಲಾಯಿಸಿಕೊಂಡು ಹೋಗುತ್ತಿದ್ದ.

ಹಿರಿಯಡಕ ಗುಡ್ಡೆಯಂಗಡಿ ಬಳಿ ಲಾರಿ ನಿಯಂತ್ರಣ ತಪ್ಪಿ ರಸ್ತೆಯ ಮಧ್ಯೆಯೇ ಮಗುಚಿಬಿದ್ದಿದೆ. ಈ ವೇಳೆ ಯಾವುದೇ ವಾಹನಗಳು ಸಂಚರಿಸದ ಪರಿಣಾಮ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.ಈ ಭಯಾನಕ ದೃಶ್ಯ ಹಿಂದಿನಿಂದ ಬರುತ್ತಿದ್ದ ಕಾರಿನವರ ಮೊಬೈಲ್ ನಲ್ಲಿ ಸೆರೆಯಾಗಿದೆ.

 

Related Articles

error: Content is protected !!