ತುಮಕೂರು :: ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳವನ್ನು ನೋಡಲು ಬಂದಿದ್ದ ಮಂಗಳೂರಿನ ಇಬ್ಬರು ಅಪಘಾತದಲ್ಲಿ ಸಾವೀಗಿಡಾಗಿದ್ದು ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಚಿಗಣಿಪಾಳ್ಯ ಬಳಿ ನಡೆದಿದೆ, ಮೃತರನ್ನು ಬಜಪೆ ಮೂಲದ ನಿವಾಸಿ ಕಿಶಾನ್ ಶೆಟ್ಟಿ( 20 ) ದಕ್ಷಿಣ ಕನ್ನಡ ಜಿಲ್ಲೆ ಭಟ್ಟರ ತೋಟ ಗ್ರಾಮದ ಫಿಲೀಪ್ ನೇರಿ ಲೋಬೋ (32) ಎಂದು ಗುರುತಿಸಲಾಗಿದೆ.
ಬೆಂಗಳೂರಿನಲ್ಲಿ ಕಂಬಳ ನೋಡಿ ವಾಪಸ್ ಆಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಇನ್ನು ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ನಿತೀಶ್ ಭಂಡಾರಿ, ಪ್ರೀತಿ ಲೋಬೋ, ಹರೀಶ್ ತೀವ್ರವಾಗಿ ಗಾಯಗೊಂಡು ಅವರನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಲಾರಿ ಗುದ್ದಿದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ಅಪ್ಪಚ್ಚಿಯಾಗಿದ್ದು, ಪೊಲೀಸರು ಹಾಗೂ ಸ್ಥಳೀಯರು ಹರಸಾಹಸದಿಂದ ಮೃತದೇಹಗಳನ್ನು ಹೊರತೆಗೆಯಲಾಗಿದೆ ಈ ಬಗ್ಗೆ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.