ಮಂಗಳೂರು : ದುಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ಯುವತಿ ಮೃತಪಟ್ಟಿದ್ದಾರೆ. ವಿದಿಶಾ ( 28 ವರ್ಷ ) ಮೃತ ಯುವತಿ, 2019ರಲ್ಲಿ ದುಬೈಗೆ ತೆರಳಿ ಎಕ್ಸ್ಕೂಜೆಟ್ ಸಂಸ್ಥೆಯಲ್ಲಿ ಅಧಿಕಾರಿಯಾಗಿ ಐದು ವರ್ಷಗಳಿಂದ ಕಾರ್ಯನಿರ್ವಹಿಸು ತ್ತಿದ್ದರು. ಪ್ರತಿ ದಿನ ಕಂಪನಿಯ ಕ್ಯಾಬ್ನಲ್ಲಿ ಸಂಚರಿಸುತ್ತಿದ್ದ ವಿದಿಶಾ, ಗುರುವಾರ ವಿಳಂಬವಾಯಿತು ಎನ್ನುವ ಕಾರಣಕ್ಕೆ ಕಚೇರಿಗೆ ತಮ್ಮ ಕಾರಿನಲ್ಲಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಗಂಭೀರ ಸ್ಥಿತಿ ಯಲ್ಲಿದ್ದ ವಿದಿಶಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅವರು ಆರು ತಿಂಗಳ ಹಿಂದಷ್ಟೇ ಡ್ರೈವಿಂಗ್ ಲೈಸೆನ್ಸ್ ಪಡೆದು ಹೊಸ ಕಾರು ಖರೀದಿಸಿದ್ದರು ಎನ್ನಲಾಗಿದೆ. ಊರಿನಲ್ಲಿ ಅವರ ಮದುವೆ ಸಿದ್ಧತೆ ನಡೆದಿದ್ದಾಗಲೇ ಈ ದುರಂತ ಸಂಭವಿಸಿದೆ