ಬೈಂದೂರು: ಬೈಂದೂರು ತಾಲೂಕಿನ ಉಳ್ಳೂರು ಗ್ರಾಮದಲ್ಲಿ ಮಹಿಳೆಯೊಬ್ಬರು ಅಕಸ್ಮಾತ್ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ ಉಳ್ಳೂರು ಗ್ರಾಮದ ನಿವಾಸಿಯಾದ ಶ್ರೀಮತಿ ಶೇಡ್ತಿ (55 ವರ್ಷ) ಮಾ.26 ರಂದು ರಾತ್ರಿ ಮನೆಯಲ್ಲಿ ಮಲಗಿದ್ದು ಬೆಳಿಗ್ಗೆ ಕಾಣದಾದಾಗ ಮನೆಯವರು ಅವರಿಗಾಗಿ ಹುಡುಕಾಟ ನಡೆಸಿದ್ದರು ನಂತರ ಅವರ ಮೃತದೇಹವು ಮನೆಯ ಸಮೀಪದ ಬಾವಿಯಲ್ಲಿ ಪತ್ತೆಯಾಗಿದ್ದು ಅಕಸ್ಮಾತ್ ಕಾಲು ಜಾರಿ ಬಾವಿಗೆ ಬಿದ್ದಿರಬೇಕೆಂದು ಸುಧಾಕರ ಪೂಜಾರಿ ಎಂಬವರು ಬೈಂದೂರು ಪೋಲೀಸ್ ಠಾಣೆಗೆ ದೂರು ನೀಡಿರುತ್ತಾರೆ