339
ಉಸುಪಿ : ಜನವರಿ 22ರಂದು ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಶ್ರೀ ರಾಮ ದೇವರ ಪ್ರಾಣ ಪ್ರತಿಷ್ಠೆಯ ಅಂಗವಾಗಿ ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಆಶ್ರಯದಲ್ಲಿ ಬೆಳಿಗ್ಗೆ ಗಂಟೆ 9.30ರಿಂದ ಮಧ್ಯಾಹ್ನ 1.00ರ ವರೆಗೆ “ಶ್ರೀ ರಾಮೋತ್ಸವ” ಕಾರ್ಯಕ್ರಮವು ‘ಶ್ರೀ ಭವಾನಿ ಮಂಟಪ‘ದಲ್ಲಿ ನಡೆಯಲಿದೆ.
ಬೆಳಿಗ್ಗೆ ಗಂಟೆ 9.30ಕ್ಕೆ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ರವರು ಜ್ಯೋತಿ ಬೆಳಗಿಸಿ “ಶ್ರೀ ರಾಮೋತ್ಸವ”ಕ್ಕೆ ಚಾಲನೆ ನೀಡಲಿದ್ದಾರೆ.
ಭಜನೆ, ಹನುಮಾನ್ ಚಾಲೀಸ್ ಮತ್ತು ಶ್ರೀ ರಾಮ ರಕ್ಷಾ ಸ್ತೋತ್ರ ಸಾಮೂಹಿಕ ಪಠಣ, ಅಯೋಧ್ಯೆ ಶ್ರೀ ರಾಮ ಮಂದಿರದ ಲೋಕಾರ್ಪಣೆಯ ನೇರ ಪ್ರಸಾರ ವೀಕ್ಷಣೆ, ಮಹಾ ಪೂಜೆ ಮತ್ತು ಅನ್ನ ಪ್ರಸಾದ ವಿತರಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ

