Home » ಜಿಲ್ಲಾ ಬಿಜೆಪಿಯಿಂದ ಡಾ! ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ
 

ಜಿಲ್ಲಾ ಬಿಜೆಪಿಯಿಂದ ಡಾ! ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ

by Kundapur Xpress
Spread the love

ಉಡುಪಿ : ಅಂಬೇಡ್ಕರ್ ಜಯಂತಿ ಪ್ರಯುಕ್ತ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಎಸ್.ಸಿ. ಮೋರ್ಚಾ ಸಹಯೋಗದೊಂದಿಗೆ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಯ ಸಂಕೀರ್ಣ ಮಣಿಪಾಲದ ರಜತಾದ್ರಿಯಲ್ಲಿರುವ ಡಾ! ಬಿ. ಆರ್. ಅಂಬೇಡ್ಕರ್ ಪ್ರತಿಮೆಗೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ನೇತೃತ್ವದಲ್ಲಿ ಮಾಲಾರ್ಪಣೆಗೈದು ಗೌರವ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಬಿಜೆಪಿ ರಾಜ್ಯ ಎಸ್.ಸಿ. ಮೋರ್ಚಾ ಉಪಾಧ್ಯಕ್ಷ ದಿನಕರ ಬಾಬು, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಜಿಲ್ಲಾ ಉಪಾಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಜಿಲ್ಲಾ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ರಾಜ್ಯ ನೇಕಾರ ಪ್ರಕೋಷ್ಠ ಸಮಿತಿ ಸದಸ್ಯ ರತ್ನಾಕರ ಇಂದ್ರಾಳಿ, ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ಚಂದ್ರ ಪಂಚವಟಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಜಿಲ್ಲಾ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಕೃಷ್ಣಮೂರ್ತಿ ಡಿ.ಬಿ., ಎಸ್.ನಾರಾಯಣ್, ಉಪಾಧ್ಯಕ್ಷ ಹೆರಿಯ ಉಪ್ಪೂರು, ಕಾರ್ಯದರ್ಶಿ ಬೇಬಿ ರಾಜೇಶ್, ಉಡುಪಿ ನಗರ ಎಸ್.ಸಿ. ಮೋರ್ಚಾ ಅಧ್ಯಕ್ಷ ಅಜಿತ್ ಕಪ್ಪೆಟ್ಟು ಮುಂತಾದವರು ಉಪಸ್ಥಿತರಿದ್ದರು.

 

Related Articles

error: Content is protected !!