ಮೈಸೂರು: ಪ್ರಧಾನಿ ಮೋದಿ ಅವರು ದೇಶದಸಂಸ್ಕೃತಿ, ಪರಂಪರೆಯನ್ನು ಉಳಿಸುವಂತಹ ಕಾರ್ಯವನ್ನು ಮಾಡುತ್ತಿದ್ದಾರೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ನುಡಿದರು ಭಾನುವಾರ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಶ್ರೀಕ್ಷೇತ್ರವಾದ ಸುತ್ತೂರಿನಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದರು
ಶ್ರೀಕ್ಷೇತದ ಮಠದ ಮುಂಭಾಗದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀಮತಿ ಪಾರ್ವತಮ್ಮ ಮತ್ತು ಶ್ರೀ ಶಾಮನೂರು ಶಿವಶಂಕರಪ್ಪ ಅತಿಥಿ ಗೃಹ ಉದ್ಘಾಟಿಸಿದ ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,
ಪ್ರಧಾನಿ ನರೇಂದ್ರ ಮೋದಿಯವರು ಅಯೋಧ್ಯೆಯಲ್ಲಿ ರಾಮಮಂದಿರ, ಕಾಶಿಯಲ್ಲಿ ಕಾಶಿ ವಿಶ್ವನಾಥ ಕಾರಿಡಾರ್, ಉಜ್ಜಯಿನಿಯಲ್ಲಿ ಮಹಾ ಕಾಳೇಶ್ವರ ಕಾರಿಡಾರ್ ಸೇರಿದಂತೆ ದೇಶದ ಸಂಸ್ಕೃತಿ, ಪರಂಪರೆಯನ್ನು ಉಳಿಸುವಂತಹ ಕಾರ್ಯದೊಂ ದಿಗೆ ಉತ್ತಮವಾದ ಕೊಡುಗೆಯನ್ನು ದೇಶಕ್ಕಾಗಿ ನೀಡುವ ಮೂಲಕ ಸಾಂಸ್ಕೃತಿಕ ಪರಂಪರೆಯನ್ನುಪುನರುತ್ಥಾನ ಮಾಡುತ್ತಿದ್ದಾರೆ ಎಂದು ಹೇಳಿದರು