ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಅಭಿವೃದ್ಧಿ ಕಡೆಗೆ ಗಮನ ನೀಡದೆ ತಮ್ಮ ಕುರ್ಚಿ ಉಳಿಸಿಕೊಳ್ಳುವ ಪ್ರಯತ್ನದಲ್ಲಿದ್ದಾರೆ ಎಂದು ಲೇವಡಿ ಮಾಡಿರುವ ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರು, ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ಗೆ ಖಾತೆ ತೆರೆಯುವುದಕ್ಕೇ ಬಿಡಬಾರದು ಎಂದು ಕರೆ ನೀಡಿದ್ದಾರೆ
ಮಂಗಳವಾರ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಬೆಂಗಳೂರಿಗೆ ಸಂಬಂಧಿಸಿದ 5 ಲೋಕಸಭಾ ಕ್ಷೇತ್ರಗಳ ಬಿಜೆಪಿಯ ಶಕ್ತಿಕೇಂದ್ರ ಪ್ರಮುಖರ ಸಭೆಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯು ತ್ತಿಲ್ಲ. ಮುಖ್ಯಮಂತ್ರಿಗಳಿಗೆ ತಮ್ಮ ಕುರ್ಚಿ ಉಳಿ ಸಿಕೊಳ್ಳುವುದೇ ಕೆಲಸವಾಗಿದ್ದರೆ, ಇನ್ನೊಬ್ಬರಿಗೆ ಅವರ ಕುರ್ಚಿ ಎಳೆಯುವುದೇ ಕೆಲಸವಾಗಿದೆ. ಬಿಜೆಪಿ ಅಭಿವೃದ್ಧಿ ಕಾರ್ಯಗಳ ಕುರಿತು ಮತ್ತು ಕಾಂಗ್ರೆಸ್‌ನ ಅಭಿವೃದ್ಧಿ ಶೂನ್ಯತೆ-ಭ್ರಷ್ಟಾಚಾರ ಕುರಿತು ಕಾರ್ಯಕರ್ತರು ಮನೆ ಮನೆಗೆ ತಲುಪಿಸಿ ಮಾಹಿತಿ ಒದಗಿಸಬೇಕು ಎಂದರು.