ಉಡುಪಿ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400 ಸೀಟುಗಳನ್ನು ನಿಶ್ಚಿತವಾಗಿ ಗೆಲ್ಲಲಿದ್ದು, ನರೇಂದ್ರ ಮೋದಿ ಅವರ ವಿಕಸಿತ ಭಾರತ ನಿರ್ಮಾಣಕ್ಕೆ ಶಕ್ತಿ ತುಂಬಲು ಕೋಟಿ ಶ್ರೀನಿವಾಸ ಪೂಜಾರಿ ಅವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸೋಣ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದರು.
ಮಂಗಳವಾರ ಸಂಜೆ, ಬ್ರಹ್ಮಾವರದ ಆಕಾಶವಾಣಿಯಿಂದ ಬಸ್ ನಿಲ್ದಾಣದ ವರೆಗೆ ನಡೆದ ರೋಡ್ ಶೋನಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಈ ಬಾರಿಯ ಚುನಾವಣೆ ದೇಶದ ಭವಿಷ್ಯದ ದೃಷ್ಟಿಯಿಂದ ಭಾರಿ ಮಹತ್ವದ ಚುನಾವಣೆ ಯಾಗಿದ್ದು, ನರೇಂದ್ರ ಮೋದಿ ನೇತೃತ್ವದಲ್ಲಿ ದೇಶದ ಆರ್ಥಿಕ, ಶೈಕ್ಷಣಿಕ, ಆರೋಗ್ಯ ಕ್ಷೇತ್ರಕ್ಕೆ ಭದ್ರ ಬುನಾದಿ ಹಾಕಲು ಸರ್ಕಾರ ಮುಂದಡಿ ಇಡಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಯಶ್ವಾಲ್ ಸುವರ್ಣ ಮಾತನಾಡಿದರು. ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್, ಪಕ್ಷದ ಮುಖಂಡರಾದ ಉದಯ ಕುಮಾರ್ ಶೆಟ್ಟಿ ನವೀನ್ ಶೆಟ್ಟಿ ಕುತ್ಯಾರು, ಪ್ರಮೋದ್ ಮಧ್ವರಾಜ್, ರಘುಪತಿ ಭಟ್, ಮಟ್ಟಾರ್ ರತ್ನಾಕರ ಹೆಗ್ಡೆ ಬೈಕಾಡಿ ಸುಪ್ರಸಾದ್ ಶೆಟ್ಟಿ ಪ್ರತಾಪ್ ಹೆಗ್ಡೆ ಮಾರಾಳಿ, ರಾಜೇಶ್ ಶೆಟ್ಟಿ ಬಿರ್ತಿ, ರಾಜೀವ್ ಕುಲಾಲ್, ಬಿ. ಎನ್. ಶಂಕರ – ಪೂಜಾರಿ, ಧನಂಜಯ ಅಮೀನ್, ಹರಿಮಕ್ಕಿ ರತ್ನಾಕರ ಶೆಟ್ಟಿ ನಿಶಾನ್ ರೈ, ಕಾರ್ಯಕರ್ತರು ಉಪಸ್ಥಿತರಿದ್ದರು.