ಕಾಪು : ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ-ಕೇರಳ ಇದರ ವಾರ್ಷಿಕ ಮಹಾಸಭೆ ಪಿಲಾರುಖಾನ ಪೆರ್ನಾಲು ಆದಿವಾಸಿ ಜೀವನ ಶಿಕ್ಷಣ ಕೇಂದ್ರದಲ್ಲಿ ನಡೆಯಿತು.ವಾರ್ಷಿಕ ಮಹಾಸಭೆಯನ್ನು ಶಾಸಕರಾದ ಗುರ್ಮೆ ಸುರೇಶ ಶೆಟ್ಟಿ ಅವರು ಉದ್ಘಾಟಿಸಿ ಮಾತನಾಡಿ ಕೊರಗ ಸಮುದಾಯದ ಜನರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಬೇಕು ಇದರಿಂದ ಅವರ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದು ಹೇಳಿದ ಅವರು ಅಳಿವಿನ ಅಂಚಿನಲ್ಲಿರುವ ಕೊರಗ ಸಮುದಾಯದ ಮುಖ್ಯ ವಾಹಿನಿಗೆ ಬರುವಂತಾಗಬೇಕು ಇದಕ್ಕಾಗಿ ಶಾಸಕನಾಗಿ ನನ್ನ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.ಈ ಸಂದರ್ಭದಲ್ಲಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಸುಶೀಲಾ ನಾಡ, ಕಾಪು ವಲಯ ಕೊರಗ ಅಭಿವೃದ್ಧಿ ಸಂಘದ ಅಧ್ಯಕ್ಷರಾದ ಶೇಖರ ಕೊಗರ, ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ಕಾರ್ಯದರ್ಶಿಗಳಾದ ಶೀಲಾ ಬಂಟ್ವಾಳ, ಕೋಶಾಧಿಕಾರಿಗಳಾದ ವಿನಾಯ ಅಡ್ವೆ, ಕೊರಗ ಮುಖಂಡರಾದ ಮತ್ತಾಡಿ, ಬೊಗ್ರ ಕೊರಗ ಉಪಸ್ಥಿತರಿದ್ದರು.