ಕೋಟ : ಕೋಟ ಸಹಕಾರಿ ವ್ಯವಸಾಯಕ ಸಂಘ ಕೋಟ ಇದರ 67ನೇ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯು ಇತ್ತೀಚಿಗೆ ವಿವೇಕ ಪದವಿ ಪೂರ್ವ ಕಾಲೇಜು, ಕೋಟ ಇದರ ಮಹಾತ್ಮಾ ಗಾಂಧಿ ಸಭಾಭವನದಲ್ಲಿ ಜರಗಿತು.ಸಂಘದ ಅಧ್ಯಕ್ಷ ಡಾ| ಕೃಷ್ಣ ಕಾಂಚನ್ ಇವರ ಅಧ್ಯಕ್ಷತೆ ವಹಿಸಿ 2023-24ನೇ ಸಾಲಿನ ವರದಿಯನ್ನು ವಾಚಿಸಿ, ಸಂಘವು 13 ಶಾಖೆಗಳನ್ನು ಹೊಂದಿ ಉತ್ತಮ ಪ್ರಗತಿ ಸಾಧಿಸಿ, ರೂ.235.77 ಕೋಟಿ ಠೇವಣಿ, ರೂ.186.15 ಕೋಟಿ ಸಾಲ ಹೊರಬಾಕಿಯಿದ್ದು, ವರದಿ ಸಾಲಿನಲ್ಲಿ ರೂ.1,320 ಕೋಟಿ ವ್ಯವಹಾರ ಮಾಡಿ ರೂ.5.66 ಕೋಟಿ ನಿವ್ವಳ ಲಾಭ ಗಳಿಸಿದ್ದು, ಸಂಘದ ಸದಸ್ಯರಿಗೆ ಶೇ.16ರ ಡಿವಿಡೆಂಡ್ ಘೋಷಿಸಿರುವುದಾಗಿ ಸಭೆಗೆ ತಿಳಿಸಿದರು.
ಸಭೆಯಲ್ಲಿ 2023-24ನೇ ಸಾಲಿನಲ್ಲಿ ಉಡುಪಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶ್ರೀ ಟಿ. ಸೀತಾರಾಮ ಶೆಟ್ಟಿ ಮತ್ತು ಜ್ಯೋತಿ ಕೃಷ್ಣ ಪೂಜಾರಿ, ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸಿ. ಲಕ್ಷ್ಮಿನಾರಾಯಣ ಕಾರಂತ, ರಾಜ್ಯಮಟ್ಟದ ಸರಕಾರಿ ನೌಕರರ ಸ್ಪರ್ಧೆಗಳಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ನಾಗರತ್ನ ಜಿ., ಡಾಕ್ಟರೇಟ್ ಪದವಿ ಪಡೆದ ಡಾ. ಎಚ್. ಜಿ. ಗಣೇಶ ಉರಾಳ, 2022-23ನೇ ಸಾಲಿನ ಜಿಲ್ಲಾ ಮಟ್ಟದ ಭತ್ತದ ಬೆಳೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದ ರಮೇಶ ಹೇರ್ಳೆ, ಅಂತರ್ ರಾಷ್ಟ್ರೀಯ ಮಟ್ಟದ ಏಷಿಯನ್ ಪವರ್ ಲಿಫ್ಟಿಂಗ್ ಪದಕ ವಿಜೇತ ಶರತ್, ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಓಟದ ಸ್ಪರ್ಧೆ ಹಾಗೂ ರಿಲೇ ಓಟದಲ್ಲಿ ಪದಕ ಪಡೆದ ಚಿನ್ಮಯ್ ಮತ್ತು ರಾಜ್ಯಮಟ್ಟದ ಕುಸ್ತಿ ಪಂದ್ಯಾಟಕ್ಕೆ ಆಯ್ಕೆಯಾದ ಕುಮಾರಿ ಪ್ರೇರಣಾ ಇವರನ್ನು ಅಭಿನಂದಿಸಲಾಯಿತು. ಹಿರಿಯ ಸದಸ್ಯರುಗಳನ್ನು ಸನ್ಮಾನಿಸಲಾಯಿತು.
ಸಂಘದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತ ಸಿಬ್ಬಂದಿ ಎಮ್. ಮಂಜುನಾಥ ಗಾಣಿಗ ಇವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭ ಸಂಘದಲ್ಲಿ ಅತ್ಯುತ್ತಮ ವ್ಯವಹಾರ ನಡೆಸಿದ ಶಾಖೆಗಳನ್ನು ಘೋಷಿಸಲಾಯಿತು. ಸಂಘದ ಕಾರ್ಯವ್ಯಾಪ್ತಿಯ ಶಾಲೆಗಳ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ.ಯಲ್ಲಿ ಅಧಿಕ ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪೆÇ್ರೀತ್ಸಾಹ ಧನ ನೀಡಿ ಪುರಸ್ಕರಿಸಲಾಯ್ತು.ಅಂಗವಿಕಲ ದತ್ತಿನಿಧಿ ವಿತರಿಸಲಾಯ್ತು. ಕಾರ್ಯಕ್ರಮದ ವೇದಿಕೆಯಲ್ಲಿ ಗೀತಾನಂದ ಪೌಂಡೇಶನ್, ಕೋಟ ಇದರ ಪ್ರವರ್ತಕರಾದ ಆನಂದ ಸಿ. ಕುಂದರ್, ಸಂಘದ ಮಾಜಿ ಅಧ್ಯಕ್ಷ ಭೋಜ ಹೆಗ್ಡೆ, ಗುರುನರಸಿಂಹ ದೇವಸ್ಥಾನ ಸಾಲಿಗ್ರಾಮ ಇದರ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಕೆ. ಎಸ್. ಕಾರಂತ ಇವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ಸಂಘದ ಉಪಾಧ್ಯಕ್ಷರಾದ ಜಿ. ರಾಜೀವ ದೇವಾಡಿಗ, ನಿರ್ದೇಶಕರುಗಳಾದ ಕೆ. ಉದಯ ಕುಮಾರ್ ಶೆಟ್ಟಿ, ಟಿ. ಮಂಜುನಾಥ, ಜಿ. ತಿಮ್ಮ ಪೂಜಾರಿ, ರವೀಂದ್ರ ಕಾಮತ್, ಮಹೇಶ ಶೆಟ್ಟಿ, ರಾಜೇಶ್ ಉಪಾಧ್ಯ, ನಾಗರಾಜ ಹಂದೆ, ಪ್ರೇಮಾ ಎಸ್. ಪೂಜಾರಿ, ರಂಜಿತ್ ಕುಮಾರ್, ರಶ್ಮಿತಾ, ಭಾಸ್ಕರ ಶೆಟ್ಟಿ, ಕೆ. ಶ್ರೀಕಾಂತ ಶೆಣೈ ಮತ್ತು ಅಚ್ಯುತ ಪೂಜಾರಿ ಉಪಸ್ಥಿತರಿದ್ದರು.
ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ ಕುಮಾರ್ ಶೆಟ್ಟಿ ಧನ್ಯವಾದ ಸಮರ್ಪಿಸಿದರು. ಕುಮಾರಿ ನಿಶಾ ಆರ್. ಪೂಜಾರಿ ಪ್ರಾರ್ಥಿಸಿದರು. ಸಂಘದ ನಿರ್ದೇಶಕ ಟಿ. ಮಂಜುನಾಥ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸ್ವಾಗತಿಸಿದರು. ಸಂಘದ ಸಿಬ್ಬಂದಿ ಶಾಲಿನಿ ಹಂದೆ ಕಾರ್ಯಕ್ರಮ ನಿರೂಪಿಸಿದರು.
ಸಭೆಯಲ್ಲಿ ಕುಂದಾಪುರ ರೂರಲ್ ಆರ್ಯುವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಅಮೃತೇಶ್ವರಿ ಶಿಕ್ಷಣ ಸಂಸ್ಥೆ, ಕೋಟ ಸಹಕಾರಿ ವ್ಯವಸಾಯಕ ಸಂಘ ಕೋಟ, ಗೀತಾನಂದ ಪೌಂಡೇಶನ್, ಕೋಟ ಮತ್ತು ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಇವರ ಸಹಯೋಗದೊಂದಿಗೆ ನಡೆದ ಉಚಿತ ಆರ್ಯುವೇದ ವೈದ್ಯಕೀಯ ತಪಾಸಣಾ ಶಿಬಿರ,ಚಿಕಿತ್ಸೆ ಹಾಗೂ ಔಷಧ ವಿತರಣೆ ಕಾರ್ಯಕ್ರಮ, ಪ್ರಸಾದ್ ನೇತ್ರಾಲಯ ಉಡುಪಿ,ಕೋಟ ಸಹಕಾರಿ ವ್ಯವಸಾಯಕ ಸಂಘ ಕೋಟ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ವಾಗ್ದಾನ್ ಒಪ್ಟಿಕಲ್ಸ್ ಸಾಲಿಗ್ರಾಮ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮುದಾಯ ಆರೋಗ್ಯ ಕೇಂದ್ರ ಕೋಟ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಅಂಧತ್ವ ನಿವಾರಣಾ ವಿಭಾಗ ಉಡುಪಿ ಇವರ ಸಹಯೋಗದೊಂದಿಗೆ ನಡೆದ ಉಚಿತ ನೇತ್ರ ತಪಾಸಣೆ ಮತ್ತು ಪೆÇರೆ ಶಸ್ತ್ರ ಚಿಕಿತ್ಸೆ ಶಿಬಿರವನ್ನು ಗೀತಾನಂದ ಪೌಂಡೇಶನ್, ಕೋಟ ಇದರ ಪ್ರವರ್ತಕ ಆನಂದ ಸಿ. ಕುಂದರ್ ಇವರು ಉದ್ಘಾಟಿಸಿದರು.
ಅಡಿಕೆ ಸಸಿಗಳ ನರ್ಸರಿ ಮತ್ತು ‘ಸಕಲ’ ಕೃಷಿ ಉಪಕರಣಗಳ ಮಾರಾಟ ಮಳಿಗೆಯನ್ನು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಇವರು ಉದ್ಘಾಟಿಸಿದರು. ಕುಂದಾಪುರ ರೂರಲ್ ಆರ್ಯುವೇದ ಮೆಡಿಕಲ್ ಕಾಲೇಜು ಮತ್ತು ಪ್ರಸಾದ್ ನೇತ್ರಾಲಯದ ವೈದ್ಯರು, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಇದರ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.