ಕುಂದಾಪುರ : ಅಪ್ಪಣ್ಣ ಹೆಗ್ಡೆಯವರು ನಡೆದಾಡುವ ಜ್ಞಾನ ಭಂಡಾರವಿದ್ದಂತೆ. ಅವರ ಸಾಮಾಜಿಕ ಬದುಕೇ ಒಂದು ಪಠ್ಯ ಶಾಲೆ. ವಿಶಾಲ ಮನೋಧರ್ಮ, ತ್ಯಾಗ, ನಾಯಕತ್ವ, ನ್ಯಾಯಿಕ ಪರಿಕಲ್ಪನೆ ಇರುವ ವ್ಯಕ್ತಿಗಳ ಸಾಲಿನಲ್ಲಿ ಬಸ್ರೂರು ಅಪ್ಪಣ್ಣ ಹೆಗ್ಡೆಯವರದು ಎತ್ತರದ ಸ್ಥಾನ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ, ಬಿ. ಅಪ್ಪಣ್ಣ ಹೆಗ್ಡೆ ಜನ್ಮ ದಿನೋತ್ಸವ ಸಮಿತಿಯ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ ಹೇಳಿದರು
ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ಬುಧವಾರ ನಡೆದ ಅಪ್ಪಣ್ಣ ಹೆಗ್ಡೆ-90 ಕಾರ್ಯಕ್ರಮದ ಕಾರ್ಯಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹಿರಿಯರಾದ ಬಸ್ರೂರು ಅಪ್ಪಣ್ಣ ಹೆಗ್ಡೆಯವರದು ಜಾತಿ, ಮತ, ಊರನ್ನು ಮೀರಿದ ವ್ಯಕ್ತಿತ್ವ. ಅವರ ಜನ್ಮ ದಿನವನ್ನು ಮಾದರಿ ಕಾರ್ಯಕ್ರಮವಾಗಿಸುವ ಮೂಲಕ ಸಂಭ್ರಮಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಡಿಸೆಂಬರ್-24 ರಂದು ನಡೆಯುವ 90 ರ ಜನ್ಮದಿನೋತ್ಸವದ ಪೂರ್ವಭಾವಿಯಾಗಿ ಆರೋಗ್ಯ, ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದರು.
ಅಪ್ಪಣ್ಣ ಹೆಗ್ಡೆ ಜನ್ಮ ದಿನೋತ್ಸವ ಸಮಿತಿಯ ವಸಂತ್ ಗಿಳಿಯಾರ್ ಸ್ವಾಗತಿಸಿದರು. ಶ್ರೀಕಾಂತ ಹೆಮ್ಮಾಡಿ ವಂದಿಸಿದರು. ಗುರುಕುಲ ವಿದ್ಯಾಸಂಸ್ಥೆಯ ವಿಶಾಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.