ಕುಂದಾಪುರ : ಇಂದು ಸಂಜೆ 4.00 ಗಂಟೆಗೆ ವಕ್ವಾಡಿಯ ಗುರುಕುಲ ಸಮೂಹ ಶಿಕ್ಷಣ ಸಂಸ್ಥೆಗಳ ಬಯಲು ಆವರಣದಲ್ಲಿ ಬಿ.ಅಪ್ಪಣ್ಣ ಹೆಗ್ಡೆ ಅವರ 90 ರ ಜನ್ಮ ದಿನೋತ್ಸವ ಕಾರ್ಯಕ್ರಮ ನಡೆಯಲಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಸದಸ್ಯರಿಂದ ಭಜನಾ ಸಂಕೀರ್ತನೆ ನಡೆಯಲಿದೆ. ಥಿಯೇಟರ್ ತಂಡದವರಿಂದ ‘ಬೇಲಿ ಮುಳ್ಳಿನ ನೀలి ಹೂಗಳು’ ರಂಗ ಗೀತೆ ಹಾಗೂ ಜಾನಪದ ಗೀತೆಗಳು ಪ್ರಸ್ತುತಿ ನಡೆಯಲಿದೆ. ಬಳಿಕ ಅರೆಹೊಳೆ ಪ್ರತಿಷ್ಠಾನದ ನಂದಗೋಕುಲ ಕಲಾವಿದರುಗಳಿಂದ ಕೊಲ್ಲೂರು ಶ್ರೀ ಮೂಕಾಂಬಿಕೆ ನೃತ್ಯ ಗಾಥೆ ಹಾಗೂ ನೃತ್ಯಗಳನ್ನು ಒಳಗೊಂಡಿರುವ ಸಾಂಸ್ಕೃತಿಕ ರಸೋಲ್ಲಾಸ ನಡೆಯಲಿದೆ
ಸಂಜೆ 6.30ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೆಂದ್ರ ಹೆಗ್ಗಡೆ ಅವರ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ ಆರಂಭಗೊಳ್ಳಲಿದೆ. ವಿಶ್ರಾಂತ ಕುಲಪತಿ ಡಾ.ಬಿ.ಎ.ವಿವೇಕ ರೈ ಅವರಿಗೆ ಬಸ್ರೂರು ಅಪ್ಪಣ್ಣ ಹೆಗ್ಡೆ ಸಾಧಕ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ