ಉಡುಪಿ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಡಾ. ಜಗಜೀವನರಾಮ್ ಅವರ 116ನೇ ಹಾಗೂ ಡಾ. ಅಂಬೇಡ್ಕರ್ ಅವರ 132ನೇ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದವರ ಶ್ರೇಯಸ್ಸಿಗಾಗಿ ಶ್ರಮಿಸಿ ಗಣನೀಯ ಸೇವೆ ಸಲ್ಲಿಸಿದ ಅಭ್ಯರ್ಥಿಗಳನ್ನು ಗುರುತಿಸಿ ಡಾ. ಜಗಜೀವನರಾಮ್ ಹಾಗೂ ಡಾ. ಅಂಬೇಡ್ಕರ್ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ತಮ್ಮ ಸ್ವವಿವರವುಳ್ಳ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕುಗಳಿಂದ ಪಡೆದು ಮಾರ್ಚ್ 18ರೊಳಗೆ ಸಲ್ಲಿಸಬೇಕು. ಮಾಹಿತಿಗಾಗಿ ಉಡುಪಿಯ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರ ಕಛೇರಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.