ಕೋಟ : ಕೋಟ ಕಲ್ಮಾಡಿ ಅಂಗನವಾಡಿ ಕೇಂದ್ರದಲ್ಲಿ ಪೋಷಣ ಅಭಿಯಾನ ಹಾಗೂ ಪೌಷ್ಟಿಕ ಆಹಾರ ಶಿಬಿರ ಕಾರ್ಯಕ್ರಮ ಬುಧವಾರ ಕಾರಂತ ಥೀಂ ಪಾರ್ಕ್ನಲ್ಲಿ ಜಂಟಿಯಾಗಿ ಆಯೋಜಿಸಿಲಾಯಿಯತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಮುದಾಯ ಆರೋಗ್ಯ ಕೇಂದ್ರ ಕೋಟ ಇದರ ಆಡಳಿತ ವೈದ್ಯಾಧಿಕಾರಿ ಡಾ. ಮಾಧವ ಪೈ ಪ್ರಸ್ತುತ ಸಮಾಜದಲ್ಲಿ ನಮ್ಮ ಆರೋಗ್ಯ ಕಾಪಾಡಿಕೊಳ್ಳುವ ಮಾರ್ಗಗಳನ್ನು ತಿಳಿಸಿ ಮಕ್ಕಳಲ್ಲಿ ಮೊಬೈಲ್ ಬಳಕೆಯ ದುಷ್ಪರಿಣಾಮಗಳು, ಫಾಸ್ಟ್ ಫುಡ್ ಸೇವನೆಯ ಅಡ್ಡ ಪರಿಣಾಮಗಳು, ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ವ್ಯಕ್ತಿತ್ವ ವಿಕಸನದ ಹಾದಿಯನ್ನು ವಿವರಿಸಿದರು.
ಕೋಟತಟ್ಟು ಪಂಚಾಯತ್ ಉಪಾಧ್ಯಕ್ಷೆ ಸರಸ್ವತಿ ಚಂದ್ರಕಾAತ್ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಲಕ್ಷ್ಮೀ ಮಾತನಾಡಿ ಇಲಾಖೆಯಿಂದ ಕೊಡಮಾಡುವ ಪೂರಕ ಆಹಾರಗಳ ಉಪಯೋಗ ಹಾಗೂ ಇಲಾಖೆಯ ಯೋಜನೆಗಳ ಬಗ್ಗೆ ಸಂಕ್ಷಿಪ್ತವಾಗಿ ಮಾಹಿತಿ ತಿಳಿಸಿದರು.
ಬಾಲವಿಕಾಶ ಸಮಿತಿಯ ಅಧ್ಯಕ್ಷ ವನಜ ಉಪಸ್ಥಿತರಿದ್ದರು. ಆಶಾ ಕಾರ್ಯಕರ್ತೆಯರು, ಮಕ್ಕಳ ಪೋಷಕರು, ಸ್ತ್ರೀ ಶಕ್ತಿ ಸದಸ್ಯರು, ಬಾಲವಿಕಾಸ ಸಮಿತಿ ಸದಸ್ಯರು, ಅಂಗನವಾಡಿ ಫಲಾನುಭವಿಗಳು ಕಾರ್ಯಗಾರದಲ್ಲಿ ಭಾಗವಹಿಸಿದ್ದರು. ಕೋಟ ಕಲ್ಮಾಡಿ ಅಂಗನವಾಡಿ ಪುಟಾಣಿಗಳು ಪ್ರಾರ್ಥಿಸಿದರು. ಹಾಗೂ ಅಂಗನವಾಡಿ ಕಾರ್ಯಕರ್ತೆ ಜಯಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿ ನಿರ್ವಹಿಸಿದರು.