ಕಾರ್ಕಳ : ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿ ಯುವತಿಯೊಬ್ಬಳನ್ನು ರಕ್ಷಿಸಿದ್ದಾರೆ. ತಾಲೂಕಿನ ಸಾಣೂರು ಗ್ರಾಮದ ನಿವಾಸಿ ಪ್ರಮೀಳಾ ವಿಜಯಕುಮಾರ್ ಜೈನ್ ಬಂಧಿತ ಶಿಕ್ಷಕಿ. ಈದು ಗ್ರಾಮದ ಹೊಸ್ಮಾರು ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಪ್ರಮೀಳಾ, ತನ್ನ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ಹಠಾತ್ ಕಾರ್ಯಾಚರಣೆ ನಡೆಸಿದ ವೇಳೆ ಶಿಕ್ಷಕಿ ಸಿಕ್ಕಿಬಿದ್ದಿದ್ದಾರೆ.