Home » ಅವಹೇಳನಕಾರಿ ಟ್ವೀಟ್ ಬಂಧನ ಬಿಡುಗಡೆ
 

ಅವಹೇಳನಕಾರಿ ಟ್ವೀಟ್ ಬಂಧನ ಬಿಡುಗಡೆ

by Kundapur Xpress
Spread the love

ತುಮಕೂರು : ಸಿಎಂ ಕುಟುಂಬದ ಕುರಿತು ಅವಹೇಳನಕಾರಿ ಟ್ವೀಟ್ ಮಾಡಿದ ಬಿಜೆಪಿ ಕಾರ್ಯಕರ್ತೆಯನ್ನು ಬಂಧಿಸಿ ನಂತರ  ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು

ಉಡುಪಿ ಕಾಲೇಜಿನ ಶೌಚಾಲಯದಲ್ಲಿ ಹಿಂದೂ ಹುಡುಗಿಯರ ವಿಡಿಯೋ ಸೆರೆ ಹಿಡಿದ ವಿವಾದದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲ ನಟರಾಜ್ ಎಂಬುವವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಏನೆಂದು ಟ್ವೀಟ್ ಮಾಡಿದ್ದರು?

ಮುಸ್ಲಿಂ ಯುವತಿಯರು ಟಾಯ್ಲೆಟ್ ನಲ್ಲಿ ಕ್ಯಾಮೆರಾ ಇಟ್ಟು ಹಿಂದೂ ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ದು ಕಾಂಗ್ರೆಸ್ ನವರ ಪ್ರಕಾರ ಮಕ್ಕಳಾಟವಂತೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೊಸೆ ಅಥವಾ ಹೆಂಡತಿಯ ವೀಡಿಯೋವನ್ನು ಇದೆ ತರ ಮಾಡಿದ್ರೆ ಅದನ್ನು ಮಕ್ಕಳಾಟ ಅಂತಾ ಒಪ್ಕೋತೀರಾ? ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದರು.ಸಿಎಂ ವಿರುದ್ಧ ಅವಹೇಳಕಾರಿ ಪೋಸ್ಟ್ ಮಾಡಿದ ಹಿನ್ನೆಲೆ ಶಕುಂತಲಾ ಅವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದರು.

ಶಕುಂತಲ ಅವರನ್ನು ಬೆಂಗಳೂರು ಪೊಲೀಸರು ಬಂಧನ ಮಾಡಿ ಅವರಿಗೆ ಎಚ್ಚರಿಕೆ ನೀಡಿದ್ದಾರೆ. ಇನ್ನೊಮ್ಮೆ ಈ ರೀತಿ ಮಾಡದಂತೆ ತಿಳಿ ಹೇಳಿದ್ದಾರೆ. ಆ ಬಳಿಕ ಪೊಲೀಸ್ ಠಾಣಾಧಿಕಾರಿಯಿಂದ ಠಾಣಾ ಜಾಮೀನು ಪಡೆದುಕೊಂಡು ಬಿಡುಗಡೆಗೊಳಿಸಲಾಗಿದೆ.

   

Related Articles

error: Content is protected !!