Home » ಅಶೋಕ್ ಚವಾಣ್ ಬಿಜೆಪಿ ಸೇರ್ಪಡೆ
 

ಅಶೋಕ್ ಚವಾಣ್ ಬಿಜೆಪಿ ಸೇರ್ಪಡೆ

by Kundapur Xpress
Spread the love

ಮುಂಬೈ: ಸೋಮವಾರವಷ್ಟೇ ತಮ್ಮ 3 ದಶಕಗಳ ಕಾಂಗ್ರೆಸ್ ರಾಜಕೀಯ ಜೀವನಕ್ಕೆ ವಿದಾಯ ಹೇಳಿದ್ದ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಮಂಗಳವಾರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಚವಾಣ್ ಇನ್ನು 1-2 ದಿನದಲ್ಲಿ ಮಹಾರಾಷ್ಟ್ರದಿಂದ ರಾಜ್ಯಸಭೆ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ.

ಮಂಗಳವಾರ ಇಲ್ಲಿ ಮಹಾರಾಷ್ಟ್ರದ ಉಪಮುಖ್ಯ ಮಂತ್ರಿ ದೇವೆಂದ್ರ ಫಡ್ನವೀಸ್, ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಶೇಖರ್ ಬಾವನ್‌ಕುಳೆ ಮೊದಲಾದವರ ಸಮ್ಮುಖದಲ್ಲಿ ಚವಾಣ್ ಬಿಜೆಪಿ ಸೇರಿದರು.

ಈ ಬಗ್ಗೆ ಹೇಳಿಕೆ ನೀಡಿರುವ ಚವಾಣ್‌, ‘ಇಂದು ನನ್ನ ಹೊಸ ರಾಜಕೀಯ ಜೀವನದ ಆರಂಭವಾ ಗುತ್ತಿದೆಎಂದಿದ್ದಾರೆ. ಚವಾಣ್ ರಾಜೀನಾಮೆ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ‘ತಮ್ಮ ಮೇಲಿನ ಹಗರಣಗಳಿಂದ ಮುಕ್ತರಾಗಲು ಚವಾಣ್‌ ಬಿಜೆಪಿ ಸೇರಿದ್ದಾರೆ ಎಂದು ಕಾಂಗ್ರೇಸ್‌ ಟೀಕಿಸಿದೆ

 

Related Articles

error: Content is protected !!