ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಕಚೇರಿಯಲ್ಲಿ ರಾಷ್ಟ್ರ ರಾಜಕೀಯ ರಂಗದಲ್ಲಿ ಅಜಾತಶತ್ರು ಎಂದೇ ಪ್ರಖ್ಯಾತರಾದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಶತ ಜನ್ಮ ದಿನಾಚರಣೆಯ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರ ಬಗ್ಗೆ ಸವಿಸ್ತಾರವಾಗಿ ಕುಂದಾಪುರ ಬಿಜೆಪಿ ಕ್ಷೇತ್ರಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ ಹಾಗೂ ಮಂಗಳೂರು ಸಹ ಪ್ರಬಾರಿ ರಾಜೇಶ್ ಕಾವೇರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಕಾರ್ಯಕ್ರಮವನ್ನು ಸತೀಶ್ ಪೂಜಾರಿ ವಕ್ವಾಡಿ ಸ್ವಾಗತಿಸಿ ಸುಧೀರ್.ಕೆ.ಎಸ್. ವಂದನಾರ್ಪಣೆಗೈದರು.
ಕುಂದಾಪುರ ಪುರಸಭಾ ಉಪಾಧ್ಯಕ್ಷೆ ವನಿತಾ ಬಿಲ್ಲವ ವಿವಿಧ ಮೋರ್ಚಾದ ಪದಾಧಿಕಾರಿಗಳು, ಪುರಸಭಾ ಸದಸ್ಯರು, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.