ಕುಂದಾಪುರ: ಆತ್ಮ ನಿರ್ಭರ ಭಾರತ ಸಂಕಲ್ಪ ಅಭಿಯಾನ ಮತ್ತು ಕಾರ್ಯಗಾರ ಕುಂದಾಪುರ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಕ್ಷೇತ್ರಾಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ ಅವರು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಯುವ ಬಿಜೆಪಿ ಮೋರ್ಚಾದ ಅಧ್ಯಕ್ಷರಾದ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಅವರು ಆತ್ಮನಿರ್ಭರ ಭಾರತದ ಅಭಿಯಾನದ ಕಾರ್ಯಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಆತ್ಮನಿರ್ಭರ ಭಾರತ ಸಂಕಲ್ಪ ಅಭಿಯಾನಕ್ಕೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಚಾಲನೆ ನೀಡಿ. ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳ ಬಗ್ಗೆ ಸಮಗ್ರ ಮಾಹಿತಿಯನ್ನು ಜನರಿಗೆ ತಲುಪಿಸುವುದು ಪ್ರಧಾನಿ ನರೇಂದ್ರ ಮೋದಿಯವರ ಪರಿಕಲ್ಪನೆಯಾದ ಆತ್ಮ ನಿರ್ಭರ ಭಾರತದ ಮಹತ್ವವನ್ನು ವಿವರಿಸಿದರು. ಪ್ರತಿಯೊಬ್ಬರೂ ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು ಹಾಗೂ ಸ್ಥಳೀಯ ಉತ್ಪನ್ನಗಳ ಬಳಕೆಗೆ ಮತ್ತು ತಯಾರಿಕೆಗೆ ಒತ್ತು ನೀಡುವುದರ ಮೂಲಕ ಆರ್ಥಿಕ ಸದೃಢತೆ ಸಾಧಿಸಬೇಕು ಎಂದು ಶಾಸಕರು ಹೇಳಿದರು.
ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಪ್ರಸಾದ್ ಬಿಲ್ಲವ ನಿರೂಪಿಸಿದರು.
ಈ ವೇದಿಕೆಯಲ್ಲಿ ಕುಂದಾಪುರ ಮಂಡಲ ಬಿಜೆಪಿ ನಿಕಟ ಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ,ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ,ಸುಧೀರ್.ಕೆ. ಎಸ್.,ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕಿರಣ್ ಪೂಜಾರಿ ತೆಕ್ಕಟ್ಟೆ ಒಬಿಸಿ ಮೋರ್ಚಾ ಅಧ್ಯಕ್ಷ ಸುರೇಂದ್ರ ಕಾಂಚನ್ ಸಂಗಮ್,ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಚೇತನ್ ಖಾರ್ವಿ, ಸಂಪತ್ ಶೇರಿಗಾರ್,ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ನಾಗರಾಜ್ ಆಚಾರ್ಯ ಹಂಗಳೂರು,ಅಶೋಕ್ ಪೂಜಾರಿ ಸಾಲಿಗ್ರಾಮ ಹಾಗೂ ಕುಂದಾಪುರ ಯುವ ಮೋರ್ಚಾ ಮತ್ತು ಒಬಿಸಿ ಮೋರ್ಚಾದ ಪದಾಧಿಕಾರಿಗಳು ಪಕ್ಷದ ಪ್ರಮುಖರು ಪುರಸಭಾ ಸದಸ್ಯರು ಉಪಸ್ಥಿತರಿದ್ದರು.

