ಮಂಗಳೂರು :’ಒಬ್ಬ ಮುಸ್ಲಿಮನ ಕೈಯಲ್ಲಿ ಅತ್ಯಾಚಾರ ಆಗಿ ಸಾಯುವ ಬದಲು ಈಗಲೇ ಸಾಯುತ್ತೇನೆ’ ಎಂದು ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸುರತ್ಕಲ್‌ನಲ್ಲಿ ಸಂಭವಿಸಿದೆ ಆರೋಪಿ ಶಾರಿಕ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ಇಡ್ಯಾ ನಿವಾಸಿ, ಮುಸ್ಲಿಂ ಸಮುದಾಯದ ಯುವಕ ಕಿರುಕುಳ ನೀಡುತ್ತಿದ್ದಾನೆ. ಪೊಲೀಸರಿಂದಲೂ ಯಾವುದೇ ನ್ಯಾಯ ಸಿಕ್ಕಿಲ್ಲ. ಒಬ್ಬ ಮುಸ್ಲಿಮನ ಕೈಯಲ್ಲಿ ಅತ್ಯಾಚಾರ ಆಗಿ ಸಾಯುವ ಬದಲು ಈಗಲೇ ಸಾಯುತ್ತೇನೆ. ಶಾರೀಕ್ ಹಾಗೂ ನೂರ್ಜಾನ್ ಇಬ್ಬರನ್ನೂ ಬಿಡಬಾರದು’ ಎಂದು ಯುವತಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಕಳೆದ ಕೆಲವು ದಿನಗಳ ಹಿಂದೆ ಯುವತಿಯ ಅಣ್ಣನಿಗೆ ಯುವಕ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಸಂದೇಶ ಹಾಕುತ್ತಿದ್ದನು. ‘ನನ್ನ ಪ್ರೀತಿಸುವಂತೆ ನಿನ್ನ ಸಹೋದರಿಗೆ ಹೇಳು, ಇಲ್ಲ ನಿನ್ನನ್ನು 24 ತುಂಡು ಮಾಡುವೆ’ ಎಂದು ಯುವತಿಯ ಸಹೋದರನಿಗೆ ಮುಸ್ಲಿಂ ಯುವಕ ಬೆದರಿಕೆ ಸಂದೇಶ ಕಳುಹಿಸಿದ್ದನು.
ನನಗೆ ಮುಸ್ಲಿಂ ಸಮಾಜದ ವ್ಯಕ್ತಿ ಬೆದರಿಕೆ ಹಾಕಿದ್ದಾನೆ ಎಂದು ಯುವತಿ ಆರೋಪ ಮಾಡಿದ್ದಾಳೆ. ಈ ಘಟನೆ ಕುರಿತಂತೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸುರತ್ಕಲ್ * ಪೊಲೀಸರು ಸದಾಶಿವ ನಗರದ ಶಾರಿಕ್ ನೂರ್ಜಹಾನ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳ ವಿರುದ್ಧ ಸೂಕ್ತ ಸಾಕ್ಷ್ಯ ಸಿಗದ ಹಿನ್ನೆಲೆಯಲ್ಲಿ ಪೊಲೀಸರು ಅವರಿಬ್ಬರನ್ನು ಬಿಟ್ಟು ಕಳುಹಿಸಿದ್ದಾರೆ. ಈ ಬಳಿಕವೂ ಆರೋಪಿ ಯುವತಿಯ ಸಹೋದರಿನಿಗೆ ನಿರಂತರ ಬೆದರಿಕೆ’ ಸಂದೇಶ ಕಳುಹಿಸಿದ ಹಿನ್ನೆಲೆಯಲ್ಲಿ ಮನನೊಂದ ಯುವತಿ ಗುರುವಾರ ರಾತ್ರಿ ಡೆತ್‌ನೋಟ್ ಬರೆದಿಟ್ಟು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ
ಯುವತಿಗೆ ಕಿರುಕುಳ ಇತ್ತು ಎಂದ ಸ್ನೇಹಿತೆ :
ಆತ್ಮಹತ್ಯೆಗೆ ಯತ್ನಿಸಿದ ಯುವತಿಗೆ ಮುಸ್ಲಿಂ ಯುವಕ ನಿರಂತರ ಕಿರುಕುಳ ನೀಡುತ್ತಿದ್ದಾನೆ ಎಂದು ಆಕೆಯ ಸ್ನೇಹಿತೆ ಸುದ್ದಿಗಾರರಲ್ಲಿ ಪ್ರತಿಕ್ರಿಯಿಸಿದ್ದಾರೆ