Home ಕರಾವಳಿ ಸುದ್ದಿಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಪ್ರಾಣಿಗಳ ಕಡಿತ ಮತ್ತು ರೇಬಿಸ್ ತಡೆಗಟ್ಟುವಿಕೆ ಕುರಿತು ಜಾಗೃತಿ ಕಾರ್ಯಕ್ರಮ

ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಪ್ರಾಣಿಗಳ ಕಡಿತ ಮತ್ತು ರೇಬಿಸ್ ತಡೆಗಟ್ಟುವಿಕೆ ಕುರಿತು ಜಾಗೃತಿ ಕಾರ್ಯಕ್ರಮ

Awareness Program on Animal Bites and Rabies Prevention at B. B. Hegde College

by Kundapur Xpress

ಕುಂದಾಪುರ : ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವತಿಯಿಂದ ವಿಶ್ವ ರೇಬಿಸ್‌ ದಿನಾಚರಣೆಯ ಅಂಗವಾಗಿ ಪ್ರಾಣಿಗಳ ಕಡಿತ ಮತ್ತು ರೇಬಿಸ್ ತಡೆಗಟ್ಟುವಿಕೆ ಕುರಿತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಆಲೂರು ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ವೈಧ್ಯಾಧಿಕಾರಿ ಡಾ. ರಂಗನಾಥ್ ವೈ.ಪಿ. ಅವರು ಮಾತನಾಡಿ, ಪ್ರಾಣಿ ಕಡಿತದಿಂದ ಉಂಟಾಗುವ ಅಪಾಯಗಳು, ರೇಬಿಸ್ ರೋಗದ ಲಕ್ಷಣಗಳು ಹಾಗೂ ಪ್ರಾಣಿ ಕಡಿತ ಸಂಭವಿಸಿದಾಗ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಕುರಿತು ಮಾಹಿತಿ ನೀಡಿದರು. ಇದೇ ಸಂದರ್ಭ ಅವರು ಪ್ರಾಣಿ ಕಡಿತವಾದ ತಕ್ಷಣ ಗಾಯವನ್ನು ಸಾಬೂನು ಮತ್ತು ನೀರಿನಿಂದ ಚೆನ್ನಾಗಿ ತೊಳೆಯಬೇಕು ಹಾಗೂ ಯಾವುದೇ ವಿಳಂಬ ಮಾಡದೆ ಸಮೀಪದ ಆರೋಗ್ಯ ಕೇಂದ್ರಕ್ಕೆ ತೆರಳಿ ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯಬೇಕು. ಅಲ್ಲದೆ, ಬೀದಿ ನಾಯಿಗಳು ಹಾಗೂ ಇತರ ಪ್ರಾಣಿಗಳೊಂದಿಗೆ ಎಚ್ಚರಿಕೆಯಿಂದ ವರ್ತಿಸುವುದು ಮತ್ತು ರೇಬಿಸ್ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅತ್ಯಂತ ಅಗತ್ಯವೆಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳಾದ ಶ್ರೀ ರಾಜೇಶ್ ಶೆಟ್ಟಿ ಹಾಗೂ ಪೂಜಾ ಕುಂದರ್ ಉಪಸ್ಥಿತರಿದ್ದರು.
ಸ್ವಯಂಸೇವಕರುಗಳಾದ ಶ್ರೇಯಾ ಸ್ವಾಗತಿಸಿ, ಪ್ರತೀಕ್ಷಾ ವಂದಿಸಿ, ಅನುಶ್ರೀ ಕಾರ್ಯಕ್ರಮ ನಿರೂಪಿಸಿದರು.

Related Articles

Leave a Comment

This site uses Akismet to reduce spam. Learn how your comment data is processed.