ಅಯೋಧ್ಯೆ: ಲೋಕಸಭೆ ಚುನಾವಣೆ ನಿಮಿತ್ತ ಬಿಜೆಪಿ ಪರ ಭರ್ಜರಿ ಪ್ರಚಾರ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಸಂಜೆ ಉತ್ತರ ಪ್ರದೇಶದ ಪವಿತ್ರ ನಗರ ಅಯೋಧ್ಯೆಗೆ ಆಗಮಿಸಿ, ಶ್ರೀರಾಮಮಂದಿರಕ್ಕೆ ಭೇಟಿ ನೀಡಿ ಪೂಜೆ ಮಾಡಿ ಆರತಿ ಸಲ್ಲಿಸಿದರು
ಈ ವೇಳೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಟ್ರಸ್ಟ್ ಸದಸ್ಯರು, ಪುರೋಹಿತರು, ಭಾರಿ ಸಂಖ್ಯೆಯ ಭಕ್ತರು ಇದ್ದರು. ಜ.22ರಂದು ‘ಪ್ರಾಣ-ಪ್ರತಿಷ್ಠಾಪನೆ’ ನಡೆದ ನಂತರ ರಾಮಮಂದಿರಕ್ಕೆ ಪ್ರಧಾನಿ ಮೋದಿಯವರ ಮೊದಲ ಭೇಟಿ ಇದಾಗಿದೆ.
ರಾಮ ಮಂದಿರದಲ್ಲಿ ಪೂಜೆ ಸಲ್ಲಿಸಿದ ನಂತರ ಪ್ರಧಾನಿ ಮೋದಿ ನಗರದಲ್ಲಿ 2 ಕಿ.ಮೀ. ಉದ್ದದ ರೋಡ್ ಶೋ ನಡೆಸಿದರು. ಶೋನಲ್ಲಿ ಬಾಬ್ರಿ ಮಸೀದಿ ಪರ ದಾವೇದಾರ ಇನ್ಸಾಲ್ ಅಸ್ಸಾರಿ ಕೂಡ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಮೇ 20ರಂದು ಅಯೋಧ್ಯೆಯಲ್ಲಿ ಮತದಾನವಿದೆ