ಕಾಪು: ಆಯುಷ್ಮಾನ್ ಭಾರತ್ ಯೋಜನೆಯ ಸಮರ್ಪಕ ಅನುಷ್ಠಾನ ಕುರಿತು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ಸಭೆಯಲ್ಲಿ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ರೋಗಿಯ ಖಾಯಿಲೆಗೆ ತುರ್ತು ಚಿಕಿತ್ಸೆ ಅವಶ್ಯಕತೆಯಿದ್ದರೆ ಸರಿಯಾಗಿ ಸ್ಪಂದಿಸುವ ಬಗ್ಗೆ ಚಿಕಿತ್ಸೆಗೆ ಕೋಡ್ ಲಭಿಸಿದ್ದರೂ ಆಸ್ಪತ್ರೆಯಲ್ಲಿ ಬೇಡ್ ನಿಡದಿರುವ ಬಗ್ಗೆ ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳು ಆಯುಷ್ಮಾನ್ ಭಾರತ್ ಯೋಜನೆಯಡಿ ನೊಂದಾಯಿಸದೇ ಇರುವ ಬಗ್ಗೆ ರಾಜ್ಯ ಸರ್ಕಾರದ ಜ್ಯೋತಿ ಸಂಜೀವಿನಿ ಯೋಜನೆಯನ್ನು ಖಾಸಗಿ ಆಸ್ಪತ್ರೆಗಳಲ್ಲಿ ಸರಿಯಾಗಿ ಅನುಷ್ಠಾನಗೊಳಿಸದೇ ಇರುವ ಬಗ್ಗೆ ಇ. ಎಸ್.ಐ ಸೌಲಭ್ಯವನ್ನು ಖಾಸಗಿ ಆಸ್ಪತ್ರೆಗಳು ಸರಿಯಾಗಿ ಅನುಷ್ಠಾನಗೊಳಿಸದೇ ಇರುವ ಬಗ್ಗೆ ಚರ್ಚಿಸಿ ಈ ಬಗ್ಗೆ ಸೂಕ್ತ ಕ್ರಮ ವಹಿಸುವಂತೆ ತಿಳಿಸಲಾಯಿತು.
ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ, ಜಿಲ್ಲಾಧಿಕಾರಿಗಳಾದ ಸ್ವರೂಪ ಟಿ.ಕೆ, ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

