Home » ರೋವರ್ಸ್ ಮತ್ತು ರೇಂಜರ್ಸ್ ಘಟಕದ ವಾರ್ಷಿಕ ಚಟುವಟಿಕೆ ಉದ್ಘಾಟನೆ
 

ರೋವರ್ಸ್ ಮತ್ತು ರೇಂಜರ್ಸ್ ಘಟಕದ ವಾರ್ಷಿಕ ಚಟುವಟಿಕೆ ಉದ್ಘಾಟನೆ

by Kundapur Xpress
Spread the love

ಕುಂದಾಪುರ : ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ 2024-2025ನೇ ಶೈಕ್ಷಣಿಕ ಸಾಲಿನ ವಾರ್ಷಿಕ ಚಟುವಟಿಕೆಗಳನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಇದರ ಬೈಂದೂರು ತಾಲೂಕು ಮಾಜಿ ಕೋಶಾಧಿಕಾರಿ ಶ್ರೀ ಪಿ. ನರಸಿಂಹ ಮೂರ್ತಿಯವರು ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು. ಪ್ರತಿಫಲದ ಅಪೇಕ್ಷೆ ಇಲ್ಲದೇ ಸೇವೆ ಮಾಡಲು ಮುಂದಾಗಬೇಕು. ವಿಧೇಯತೆ, ವಿನಯತೆ ಅಳವಡಿಸಿಕೊಂಡು ಪರೋಪಕಾರಕ್ಕೆ ಸ್ಪಂದಿಸಬೇಕು ಎಂದು ತಿಳಿಸಿದರು.ಕುಂದಾಪುರ ಎಚ್.ಎಮ್.ಎಮ್. ಶಾಲೆಯ ಶಿಕ್ಷಕಿ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಕುಂದಾಪುರ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿಯಾದ ಶ್ರೀಮತಿ ರೇಖಾ ಕೆ., ವಿದ್ಯಾರ್ಥಿ ಪ್ರತಿನಿಧಿಗಳಾದ ಶಮಂತ್ ಹಾಗೂ ಅನುಶಾ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ರೋವರ್ಸ್ ಘಟಕದ ಸಂಯೋಜಕರಾದ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ರೇಂಜರ್ಸ್ ಘಟಕದ ಸಂಯೋಜಕರಾದ ಪೂಜಾ ಕುಂದರ್ ವಂದಿಸಿದರು.ಇದೇ ಸಂದರ್ಭದಲ್ಲಿ ಇತ್ತೀಚೆಗೆ ಘಟಕದ ವತಿಯಿಂದ ನಡೆಸಿದ ಪರಿಸರ ಪ್ರೇಮಿ ಮಣ್ಣಿನ ಗಣಪತಿ ರಚನಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು.ಸ್ವಯಂಸೇವಕರಾದ ಪನ್ನಗ ಹಾಗೂ ರಶ್ಮಿತಾ ಅತಿಥಿಗಳನ್ನು ಪರಿಚಯಿಸಿ, ರತನ್ ಬಹುಮಾನ ವಿಜೇತರ ಪಟ್ಟಿಯನ್ನು ವಾಚಿಸಿ, ಸಮೃದ್ಧಿ ಕಿಣಿ ನಿರೂಪಿಸಿದರು.

 

Related Articles

error: Content is protected !!