ಕುಂದಾಪುರ : ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಹಾಗೂ ಕನ್ನಡ ಸಂಘದ ಜಂಟಿ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ‘ಹೆಸರಾಗಲಿ ಕರ್ನಾಟಕ ಉಸಿರಾಗಲಿ ಕನ್ನಡ’ ಶೀರ್ಷಿಕೆಯಡಿಯಲ್ಲಿ ಕನ್ನಡ ದೇಶಭಕ್ತಿ ಗೀತೆಗಳ ಸಮೂಹ ಗಾಯನ ಸ್ಪರ್ಧೆ ನಡೆಯಿತು.
ಈ ಸಂಧರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಪೆÇ್ರ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲ ಶ್ರೀ ಚೇತನ್ ಶೆಟ್ಟಿ ಕೋವಾಡಿ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ವೀಣಾ ಭಟ್, ನಿರ್ವಹಣಾ ವಿಭಾಗದ ಪ್ರಾಧ್ಯಾಪಕ ಶ್ರೀ ಪ್ರವೀಣ್ ಮೊಗವೀರ ತೀರ್ಪುಗಾರರಾಗಿದ್ದು, ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕನ್ನಡ ಸಂಘದ ಸಂಯೋಜಕರಾದ ಶ್ರೀಮತಿ ರೇμÁ್ಮ ಶೆಟ್ಟಿ ಮತ್ತು ಶ್ರೀಮತಿ ವಿನಯಾ ಶೆಟ್ಟಿ ಕಾರ್ಯಕ್ರಮವನ್ನು ಸಂಯೋಜಿಸಿದರು. ಸುಮಾರು 15 ತಂಡಗಳು ಭಾಗವಹಿಸಿದ್ದು, ತೃತೀಯ ಬಿ.ಕಾಂ. (ಬಿ) ತರಗತಿಯ ರಶ್ಮಿ ಮತ್ತು ತಂಡ ಪ್ರಥಮ ಸ್ಥಾನ, ದ್ವಿತೀಯ ಬಿ.ಬಿ.ಎ. ತರಗತಿಯ ಸುಹಾನಿ ಮತ್ತು ತಂಡ ದ್ವಿತೀಯ ಸ್ಥಾನ ಹಾಗೂ ತೃತೀಯ ಬಿ.ಎಸ್ಸಿ. ತರಗತಿಯ ಲಕ್ಷ್ಮಿಕಾಂತ್ ಮತ್ತು ತಂಡ ತೃತೀಯ ಸ್ಥಾನ ಪಡೆದುಕೊಂಡಿತು.