Home » ಅಪರಾಧ ತಡೆ ಮಾಸಾಚರಣೆ
 

ಅಪರಾಧ ತಡೆ ಮಾಸಾಚರಣೆ

by Kundapur Xpress
Spread the love

ಕುಂದಾಪುರ : ಸಾಮಾಜಿಕ ಜಾಲತಾಣಗಳ ಉಳಿಕೆಯಲ್ಲಿ ಯುವ ಜನತೆ ಎಚ್ಚರಿಕೆ ವಹಿಸಬೇಕು. ಸಮಾಜದಲ್ಲಿ ನಿರಂತರವಾಗಿ ಆಗುತ್ತಿರುವ ವಿವಿಧ ಅಪರಾಧಗಳ ಕುರಿತು ಮತ್ತು ಅಪರಾಧವನ್ನು ತಡೆಯುವ ಬಗ್ಗೆ ವಿದ್ಯಾರ್ಥಿಗಳು ಜಾಗೃತೆ ವಹಿಸಬೇಕು ಎಂದು ಕುಂದಾಪುರ ಪೊಲೀಸ್ ಠಾಣೆಯ ಉಪನಿರೀಕ್ಷಕ ಶ್ರೀ ವಿನಯ ಎಂ. ಕೊರ್ಲಹಳ್ಳಿ ಹೇಳಿದರು.
ಅವರು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕವು, ಕುಂದಾಪುರ ಪೊಲೀಸ್ ಠಾಣೆಯ ಸಹಯೋಗದೊಂದಿಗೆ ಆಯೋಜಿಸಿದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು. ಇದೇ ಸಂದರ್ಭ ಸೈಬರ್ ಕ್ರೈಂ, ಡ್ರಗ್ಸ್ ಹಾಗೂ ಟ್ರಾಫಿಕ್ ರೂಲ್ಸ್ ಕುರಿತು ಮಾಹಿತಿ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪೊಲೀಸ್ ಸಿಬ್ಬಂದಿ ಶ್ರೀ ಅವಿನಾಶ್ ಉಪಸ್ಥಿತರಿದ್ದರು.
ಉಪಪ್ರಾಂಶುಪಾಲ ಹಾಗೂ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಶ್ರೀ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಸ್ತಾವಿಸಿದರು. ಎನ್.ಎಸ್.ಎಸ್. ಘಟಕದ ಕಾರ್ಯಕ್ರಮಾಧಿಕಾರಿಯಾದ ದೀಪಾ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಎನ್.ಎಸ್.ಎಸ್. ಸ್ವಯಂಸೇವಕ ಸುಹಾಸ್ ಮಲ್ಯ ಪ್ರಾರ್ಥಿಸಿದರು

   

Related Articles

error: Content is protected !!