ಕುಂದಾಪುರ : ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್‍ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಅಕ್ಟೋಬರ್ 11 ರಂದು ಕಾಲೇಜಿನ ಸಭಾಂಗಣದಲ್ಲಿ ಜರುಗಿತು.
ಇಂಡಿಯನ್ ರೆಡ್‍ಕ್ರಾಸ್ ಘಟಕದ ಸಭಾಪತಿಗಳಾದ ಶ್ರೀ ಜಯಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಯುವ ರೆಡ್‍ಕ್ರಾಸ್ ಕಾರ್ಯವೈಖರಿಯಲ್ಲಿ ಸ್ವಯಂ ಸೇವಕರ ಪಾತ್ರದ ಕುರಿತು ಹಾಗೂ ಕಾಲೇಜಿನ ರೆಡ್‍ಕ್ರಾಸ್ ಘಟಕ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಗುರುತಿಸುವಂತಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಇದೇ ಸಂದರ್ಭದಲ್ಲಿ ರೆಡ್‍ಕ್ರಾಸ್ ಘಟಕದವರು ಕೊಡಮಾಡಿದ ಒಂದು ಲಕ್ಷ ರೂಪಾಯಿ ಮೌಲ್ಯದ ವಿದ್ಯಾರ್ಥಿವೇತನವನ್ನು ಆಯ್ದ ವಿದ್ಯಾರ್ಥಿಗಳಿಗೆ ಅವರ ಹೆತ್ತವರ ಸಮ್ಮುಖದಲ್ಲಿ ವಿತರಿಸಲಾಯಿತು.
ಇಂಡಿಯನ್ ರೆಡ್‍ಕ್ರಾಸ್ ಸೊಸೈಟಿಯ ಯುವ ರೆಡ್‍ಕ್ರಾಸ್ ಸಂಯೋಜನಾಧಿಕಾರಿಯಾದ ಶ್ರೀ ಸತ್ಯನಾರಾಯಣ್ ಪುರಾಣಿಕ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪೆÇ್ರ| ಕೆ. ಉಮೇಶ್ ಶೆಟ್ಟಿ ಸಮಾಜದ ಶ್ರೇಯೋಭಿವೃದ್ದಿಯಲ್ಲಿ ಯುವ ರೆಡ್‍ಕ್ರಾಸ್ ಘಟಕ ಬೇರೆ ಬೇರೆ ಮಜಲುಗಳಲ್ಲಿ ಸೇವಾ ಭಾವನೆಯಿಂದ ಪಾಲ್ಗೊಳ್ಳಬೇಕು ಎಂದು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.
ಇಂಡಿಯನ್ ರೆಡ್‍ಕ್ರಾಸ್ ಸೊಸೈಟಿಯ ಕಾರ್ಯದರ್ಶಿಗಳಾದ ಶ್ರೀ ಸೀತಾರಾಮ್ ಶೆಟ್ಟಿ, ಕೋಶಾಧಿಕಾರಿಯಾದ ಶ್ರೀ ಶಿವರಾಮ್ ಶೆಟ್ಟಿ, ಸದಸ್ಯರಾದ ಶ್ರೀ ಗಣೇಶ್ ಆಚಾರ್ ಉಪಸ್ಥಿತರಿದ್ದರು. ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಕ ಮಾತನಾಡಿದರು. ಯುವ ರೆಡ್‍ಕ್ರಾಸ್ ಘಟಕದ ಸಂಯೋಜಕರಾದ ಶ್ರೀ ಯೋಗೀಶ್ ಶ್ಯಾನುಭೋಗ ಸ್ವಾಗತಿಸಿದರು, ಸಹ ಸಂಯೋಜಕಿಯಾದ ಮಾಲತಿ ಕುಂದರ್ ವಂದಿಸಿದರು. ವಿದ್ಯಾರ್ಥಿನಿ ಶಿಲ್ಪಾ ಕೊಠಾರಿ ಕಾರ್ಯಕ್ರಮ ನಿರೂಪಿಸಿದರು.