Home » CA Foundation ಪರೀಕ್ಷೆಯಲ್ಲಿ ಉತ್ಕೃಷ್ಟ ಸಾಧನೆಗೈದ ವಿದ್ಯಾರ್ಥಿಗಳು
 

CA Foundation ಪರೀಕ್ಷೆಯಲ್ಲಿ ಉತ್ಕೃಷ್ಟ ಸಾಧನೆಗೈದ ವಿದ್ಯಾರ್ಥಿಗಳು

by Kundapur Xpress
Spread the love

ಕುಂದಾಪುರ  : ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆAಟ್ಸ್ ಆಫ್ ಇಂಡಿಯಾ ನಡೆಸುವ ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉತ್ಕೃಷ್ಟ ಸಾಧನೆಗೈದಿದ್ದಾರೆ.
ವಿಘ್ನೇಶ್, ಶ್ರದ್ಧಾ, ಸಿಂಚನ, ಮನೀಷ್, ಕೌಶಲ್, ಸುರಕ್ಷಾ ಹಾಗೂ ಶ್ರೇಯಸ್ ಇವರು ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವೀ ರೀಚ್ ಸಂಸ್ಥೆಯ ಪಠ್ಯ ಪ್ರವಚನ, ಮಧ್ಯಂತರ ಮಾದರಿ ಪರೀಕ್ಷೆಗಳು ಹಾಗೂ ನುರಿತ ತರಬೇತುದಾರರಿಂದ ತರಬೇತಿ ಮತ್ತು ಮಾರ್ಗದರ್ಶನ ಪಡೆದು ವಿದ್ಯಾರ್ಥಿಗಳು ಈ ಸಾಧನೆಗೈದಿದ್ದಾರೆ.
ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

 

Related Articles

error: Content is protected !!