Home » ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಸಂವಹನ ಕೌಶಲ ಕುರಿತು ವಿಶೇಷ ಉಪನ್ಯಾಸ
 

ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಸಂವಹನ ಕೌಶಲ ಕುರಿತು ವಿಶೇಷ ಉಪನ್ಯಾಸ

by Kundapur Xpress
Spread the love

ಕುಂದಾಪುರ : ನಿರಂತರ ವಿದ್ಯಾರ್ಥಿಗಳೊಂದಿಗೆ ಮುಖಾಮುಖಿ ನಡೆಸುವ ಅಧ್ಯಾಪಕ ವೃತ್ತಿಗೆ ಜ್ಞಾನದಷ್ಟೇ ಸಂವಹನವೂ ಮುಖ್ಯ. ವಿದ್ಯಾರ್ಥಿಗಳ ಮನವರಿತು ಸಂದರ್ಭವನ್ನರಿತು ಮಾತಾಡಿದಾಗ ಮಾತ್ರ ಈ ವೃತ್ತಿಗೆ ನ್ಯಾಯ ಒದಗಿಸಲು ಸಾಧ್ಯ ಎಂದು ನ್ಯೂ ಮೆಡಿಕಲ್ ಕುಂದಾಪುರದ ದಿನಕರ ಶೆಟ್ಟಿ ಕೆ. ಹೇಳಿದರು.
ಇವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಆಯೋಜಿಸಿದ ಸಿಬ್ಬಂದಿ ಪುನಶ್ಚೇತನ ಕಾರ್ಯಕ್ರಮ ಬೆಳದಿಂಗಳ ಚಿಂತನ ಉಪನ್ಯಾಸ ಮಾಲಿಕೆಯಲ್ಲಿ “ಸಂವಹನ ಕೌಶಲ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರು ಹಾಗೂ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಸಿದರು. ಕಾರ್ಯಕ್ರಮ ಸಂಯೋಜಕಿ ಶ್ರೀಮತಿ ರೇಷ್ಮಾ ಶೆಟ್ಟಿ ಸ್ವಾಗತಿಸಿ, ಗಣಿತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ನಿರ್ಮಲ ಬಿಲ್ಲವ ಪ್ರಾರ್ಥಿಸಿದರು. ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಶ್ರೀ ಶರತ್ ಕುಮಾರ್ ಅತಿಥಿಗಳನ್ನು ಪರಿಚಯಿಸಿದರು. ನಿರ್ವಹಣಾ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಅವಿತಾ ಕೊರೆಯ ವಂದಿಸಿದರು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಪ್ರವೀಣಾ ಎಮ್. ಪೂಜಾರಿ ನಿರೂಪಿಸಿದರು.

 

Related Articles

error: Content is protected !!