ಕುಂದಾಪುರ : ಉಡುಪಿಯ ಪೂರ್ಣಪ್ರಜ್ಞಾ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮ್ಯಾನೇಜ್ಮೆಂಟ್, ಐಟಿ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಗುಂಪು ನೃತ್ಯ, ಸಮೂಹ ಗೀತೆ, ಬಿಸಿನೆಸ್ ಪ್ಲಾನ್, ಫ್ಯಾಶನ್ ಶೋ, ಐಟಿ ರಸಪ್ರಶ್ನೆಗಳಲ್ಲಿ ಪ್ರಥಮ ಸ್ಥಾನ ಹಾಗೂ ಬೆಸ್ಟ್ ಮ್ಯಾನೇಜರ್ ದ್ವಿತೀಯ ಸ್ಥಾನದೊಂದಿಗೆ ಸಮಗ್ರ ದ್ವಿತೀಯ ಸ್ಥಾನ ಪಡೆಯುವ ಮೂಲಕ ಸಾಧನೆ ಮಾಡಿದ್ದು
ಈ ತಂಡವನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀ ಬಿ.ಎಂ. ಸುಕುಮಾರ ಶೆಟ್ಟಿ, ಆಡಳಿತ ಮಂಡಳಿಯವರು, ಕಾಲೇಜಿನ ಪ್ರಾಂಶುಪಾಲರದ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರಾದ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಐಕ್ಯೂಎಸಿ ಸಂಯೋಜಕಿ ಹಾಗೂ ಸಾಂಸ್ಕೃತಿಕ ತಂಡದ ಸಂಯೋಜಕಿಯಾದ ಶ್ರೀಮತಿ ದೀಪಿಕಾ ಜಿ., ನರ‍್ವಹಣಾ ವಿಭಾಗದ ಮುಖ್ಯಸ್ಥೆ ಶ್ರೀಮತಿ ನಂದಾ ರೈ, ನರ‍್ವಹಣಾ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀ ರಜತ್ ಬಂಗೇರ, ಬೋಧಕ-ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ

