ಕುಂದಾಪುರ : ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಲಲಿತ ಕಲಾಸಂಘ ಹಾಗೂ ಅದಿತಿ ಆರ್ಟ್ ಗ್ಯಾಲರಿ ಉಡುಪಿ ಇವರ ಆಶ್ರಯದಲ್ಲಿ ಇಂಡಿಯಾ ಫೌಂಡೇಶನ್ ಫಾರ್ ದಿ ಆರ್ಟ್ಸ್ (ಐ.ಎಫ್.ಎ) ಸಹಯೋಗದೊಂದಿಗೆ ಕಲಾವಿದರಿಗೆ ಮಾಹಿತಿ ನೀಡುವ ಒಂದು ದಿನದ ಕಾರ್ಯಾಗಾರ ಬಿ. ಬಿ. ಹೆಗ್ಡೆ ಕಾಲೇಜಿನ ಗಣಕ ವಿಜ್ಞಾನ ಪ್ರಯೋಗಾಲಯದಲ್ಲಿ ನಡೆಯಿತು.
ಕಲಾ ಶಿಕ್ಷಣ ಸಂಸ್ಥೆಯ ಕಾರ್ಯಕ್ರಮಾಧಿಕಾರಿ ರಾಧಿಕಾ ಭಾರದ್ವಾಜ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಐ.ಎಫ್.ಎ ಸಂಸ್ಥೆಯ ವಿವಿಧ ಕಾರ್ಯಕ್ರಮಗಳ ಬಗ್ಗೆ ಮತ್ತು ಪ್ರಸ್ತಾವನೆ ಸಲ್ಲಿಕೆ ಕುರಿತು ಕಲಾವಿದರಿಗೆ ಮಾಹಿತಿ ನೀಡಿದರು.
ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು
ಶಿಕ್ಷಕ ಗಣಪತಿ ಹೋಬಳಿದಾರ್ ಹಾಗೂ ಕಾಲೇಜಿನ ಲಲಿತ ಕಲಾ ಸಂಘದ ಸಂಯೋಜಕರಾದ ದೀಪಿಕಾ ಜಿ., ನಿರ್ಮಲ ಬಿಲ್ಲವ, ರವೀನಾ ಸಿ ಪೂಜಾರಿ ಕಾರ್ಯಕ್ರಮ ಸಂಯೋಜಿಸಿದರು. ಸ್ಥಳೀಯ ಯಕ್ಷಗಾನ, ರಂಗಭೂಮಿ, ಸಂಗೀತ ಹಾಗೂ ಇತರ ಕಲಾ ಪ್ರಕಾರಗಳಲ್ಲಿ ಗುರುತಿಸಿಕೊಂಡ ಕಲಾವಿದರು ಈ ಮಾಹಿತಿ ಕಾರ್ಯಾಗಾರದಲ್ಲಿ ಪಾಲ್ಗೊಂಡರು.

