Home » ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್
 

ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್

by Kundapur Xpress
Spread the love

ಕುಂದಾಪುರ : ವೀರ ಸೈನಿಕರ ತ್ಯಾಗ ಮತ್ತು ಬಲಿದಾನವನ್ನು ನೆನಪಿಸುವುದರ ಜೊತೆಗೆ ದೇಶದ ಐತಿಹಾಸಿಕ ಗೆಲುವಿಗೆ ಅಭಿನಂದನೆ ಸಲ್ಲಿಸಲು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಸಿ.ಸಿ. ಘಟಕದ ಆಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಮಾತನಾಡಿ, ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತೀಯ ಸೈನಿಕರು ವಿಜಯ ಪತಾಕೆ ಹಾರಿಸಿದ ದಿನವನ್ನು ನೆನಪಿಸಿಕೊಳ್ಳುವುದು, ಸಂಭ್ರಮಿಸುವುದು ಮತ್ತು ಭಾರತೀಯ ಸೈನ್ಯದ ಶೌರ್ಯ, ಸಾಹಸವನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವುದು ನಮ್ಮ ಕರ್ತವ್ಯ ಎಂದು ಹೇಳಿದರು.

ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಸ್ತಾವಿಸಿದರು. ಕಾರ್ಯಕ್ರಮ ಸಂಯೋಜಕರಾದ ANO Lt. ಹರೀಶ್ ಬಿ., ಎನ್.ಸಿ.ಸಿ. ಕೇರ್ ಟೇಕರ್ ಶ್ರೀ ಶರತ್ ಕುಮಾರ್ ಉಪಸ್ಥಿತರಿದ್ದರು.

ಎನ್.ಸಿ.ಸಿ. ಕೆಡೆಟ್‌ಗಳಾದ ಸಹನಾ ಪ್ರಾರ್ಥಿಸಿ, ಸುಪ್ರಜ್ ಕುಮಾರ್ ನಿರೂಪಿಸಿದರು.

 

Related Articles

error: Content is protected !!