Home » ಮಾನಸಿಕ ಆರೋಗ್ಯದ ಬಗ್ಗೆ ವಿಶೇಷ ಉಪನ್ಯಾಸ
 

ಮಾನಸಿಕ ಆರೋಗ್ಯದ ಬಗ್ಗೆ ವಿಶೇಷ ಉಪನ್ಯಾಸ

by Kundapur Xpress
Spread the love

ಕುಂದಾಪುರ : ಆರೋಗ್ಯದ ಪ್ರಾಮುಖ್ಯತೆ, ದಿನನಿತ್ಯದ ಒತ್ತಡ ನಿರ್ವಹಣೆ, ಆತ್ಮವಿಶ್ವಾಸ ಬೆಳೆಸುವ ಮಾರ್ಗಗಳು ಹಾಗೂ ಯುವಜನತೆಗೆ ಬೇಕಾದ ನಿಷ್ಠೆ ಮತ್ತು ಸಮತೋಲನದ ಬಗ್ಗೆ, ಜೊತೆಗೆ ನಕಾರಾತ್ಮಕ ಚಿಂತನೆಗಳನ್ನು ಹೇಗೆ ತಡೆಗಟ್ಟುವುದು ಮತ್ತು ಜೀವನದಲ್ಲಿ ಪ್ರೇರಣೆಯಿಂದ ಮುಂದೆ ಸಾಗುವ ಬಗೆಯನ್ನು ಉಡುಪಿ ಡಾ. ಎ.ವಿ. ಬಾಳಿಗ ಆಸ್ಪತ್ರೆಯ ಕೌನ್ಸಿಲರ್ ಮತ್ತು ಆಡಳಿತಾಧಿಕಾರಿ ಶ್ರೀಮತಿ ಸೌಜನ್ಯಾ ಶೆಟ್ಟಿ ತಿಳಿಸಿದರು.

ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಕಾಲೇಜಿನ ಐಕ್ಯೂಎಸಿ ಘಟಕ ಹಮ್ಮಿಕೊಂಡ ‘ಪ್ರೇರಣಾ’ ಶಿಬಿರದಲ್ಲಿ ‘ಮಾನಸಿಕ ಆರೋಗ್ಯ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಐಕ್ಯೂಎಸಿ ಸಂಯೋಜಕಿ ಹಾಗೂ ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಶ್ರೀಮತಿ ದೀಪಿಕಾ ಜಿ., ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಬೋಧಕ-ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.

ಕಾರ್ಯಕ್ರಮ ಸಂಯೋಜಕರಾದ ದೀಪ ಪೂಜಾರಿ ಕಾರ್ಯಕ್ರಮ ನಿರೂಪಿಸಿ, ಪ್ರಣಮ್ ಆರ್. ಬೆಟ್ರಬೆಟ್ ವಂದಿಸಿದರು.

 

Related Articles

error: Content is protected !!