Home » ಬಿ.ಸಿ.ಎ. ವಿದ್ಯಾರ್ಥಿಗಳಿಗೆ ಪೂರ್ವ ಪರಿಚಯ ಕಾರ್ಯಕ್ರಮ
 

ಬಿ.ಸಿ.ಎ. ವಿದ್ಯಾರ್ಥಿಗಳಿಗೆ ಪೂರ್ವ ಪರಿಚಯ ಕಾರ್ಯಕ್ರಮ

ಬಿ.ಬಿ. ಹೆಗ್ಡೆ ಕಾಲೇಜು

by Kundapur Xpress
Spread the love

ಕುಂದಾಪುರ : 2025-26ನೇ ಸಾಲಿನಲ್ಲಿ ಕಾಲೇಜಿಗೆ ಸೇರ್ಪಡೆಗೊಂಡ ಬಿ.ಸಿ.ಎ. ವಿದ್ಯಾರ್ಥಿಗಳಿಗೆ ಪೂರ್ವ ಪರಿಚಯ ಕಾರ್ಯಕ್ರಮವನ್ನು ಜುಲೈ 25ರಂದು ಹಮ್ಮಿಕೊಳ್ಳಲಾಯಿತು.
ಗಣಕಶಾಸ್ತç ವಿಭಾಗದ ಮುಖ್ಯಸ್ಥರಾದ ಮಹೇಶ್ ಕುಮಾರ್ ಬಿ.ಸಿ.ಎ(ಎ.ಐ), ಬಿ.ಸಿ.ಎ ಸೈಬರ್ ಸೆಕ್ಯೂರಿಟಿ ಹಾಗೂ ಬಿ.ಸಿ.ಎ. ಕೋರ್ಸ್ಗಳ ವಿಶೇಷತೆಗಳು, ವ್ಯತ್ಯಾಸಗಳು, ಭವಿಷ್ಯದಲ್ಲಿ ವಿದ್ಯಾರ್ಥಿಗಳಿಗೆ ಈ ಕೋರ್ಸ್ಗಳಿಂದ ಲಭ್ಯವಾಗುವ ಪ್ರಯೋಜನಗಳು ಹಾಗೂ ಉದ್ಯೋಗಾವಕಾಶಗಳ ಕುರಿತು ತಿಳಿಸುತ್ತಾ ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭ ಹಾರೈಸಿದರು.
ಸಂಸ್ಥೆಯ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಐಕ್ಯೂಎಸಿ ಸಂಯೋಜಕಿ ಹಾಗೂ ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಶ್ರೀಮತಿ ದೀಪಿಕಾ ಜಿ. ಕಾರ್ಯಕ್ರಮ ಸಂಯೋಜಿಸಿದರು.

ಸAಸ್ಥೆಯ ಡೀನ್ ಅಕಾಡೆಮಿಕ್ ಹಾಗೂ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಶ್ರೀ ಗಿರಿರಾಜ್ ಭಟ್ ಹಾಗೂ ಇತರ ಪ್ರಾಧ್ಯಾಪಕರು ಉಪಸ್ಥಿತರಿದ್ದರು.
ಗಣಕಶಾಸ್ತç ಸಹಾಯಕ ಪ್ರಾಧ್ಯಾಪಕರಾದ ಶ್ರೀ ಹರೀಶ್ ಕಾಂಚನ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

 

Related Articles

error: Content is protected !!