Categories
ಕರಾವಳಿ ಸುದ್ದಿ

ಶ್ರಮದಾನ ಶಿಬಿರ

      ಕುಂದಾಪುರ : ಮೊಳಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿರುವ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದಲ್ಲಿ ಕೃಷಿಕರಾದ ಮೊಳಹಳ್ಳಿ ಕಂಬಳಗದ್ದೆಮನೆ ಶ್ರೀ ಚಂದ್ರಶೇಖರ್ ಶೆಟ್ಟಿ ಅವರು ಶ್ರಮದಾನಕ್ಕೆ ಚಾಲನೆ ನೀಡಿದರು.

ಶ್ರೀ ಉಮಾಮಹೇಶ್ವರಿ ದೇವಸ್ಥಾನ, ಮೊಳಹಳ್ಳಿ ಇಲ್ಲಿನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ಉಡುಪ ಶುಭ ಹಾರೈಸಿದರು. ಈ ಸಂದರ್ಭ ಪ್ರದೀಪ್ ಶೆಟ್ಟಿ ಮೊಳಹಳ್ಳಿ, ಕಾಲೇಜಿನ ಉಪಪ್ರಾಂಶುಪಾಲ ಹಾಗೂ ಎನ್.ಎಸ್.ಎಸ್. ಶಿಬಿರಾಧಿಕಾರಿ ಡಾ| ಚೇತನ್ ಶೆಟ್ಟಿ ಕೋವಾಡಿ, ಎನ್.ಎಸ್.ಎಸ್. ಘಟಕ 2ರ ಶಿಬಿರಾಧಿಕಾರಿ ದೀಪ ಪೂಜಾರಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಉಪನ್ಯಾಸಕರಾದ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ, ರವಿನಾ ಸಿ. ಪೂಜಾರಿ ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು. ಎನ್.ಎಸ್.ಎಸ್. ಶಿಬಿರಾರ್ಥಿಗಳಾದ ಶ್ರೇಯಾ ಖಾರ್ವಿ ಪ್ರಾರ್ಥಿಸಿ, ಆಕಾಶ್ ಸ್ವಾಗತಿಸಿ, ಸುಮಂತ್ ವಂದಿಸಿ, ಸಮೀಕ್ಷಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.