ಕುಂದಾಪುರ : ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಿಬ್ಬಂದಿ ಕ್ಷೇಮಪಾಲನ ಸಂಘದ ಆಶ್ರಯದಲ್ಲಿ ವಯೋನಿವೃತ್ತಿ ಹೊಂದಿದ ಕಾಲೇಜಿನ ಕಚೇರಿ ಅಧೀಕ್ಷಕರಾದ ಕೆ. ಗಾಯತ್ರಿ ಶೇಟ್ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅವರು ಮಾತನಾಡಿ, ಕೆ. ಗಾಯತ್ರಿ ಶೇಟ್ ಅವರು ನಮ್ಮ ಸಂಸ್ಥೆ ಆರಂಭಗೊಂಡ ದಿನದಿಂದಲೇ ಕಚೇರಿ ಸಿಬ್ಬಂದಿಯಾಗಿ ಸೇರ್ಪಡೆಗೊಂಡು ಬೇರೆ-ಬೇರೆ ಹುದ್ದೆಗಳನ್ನು ನಿಭಾಯಿಸಿ, ಕಚೇರಿ ಅಧೀಕ್ಷಕರಾಗಿ ವಯೋನಿವೃತ್ತಿ ಹೊಂದುತ್ತಿದ್ದಾರೆ. ಕಡತಗಳ ನಿರ್ವಹಣೆ ಸೇರಿದಂತೆ ಅನೇಕ ಮಹತ್ವದ ಜವಾಬ್ದಾರಿಗಳನ್ನು ಅತ್ಯಂತ ಪ್ರಾಮಾಣಿಕರಾಗಿ ನಿರ್ವಹಿಸಿದವರು. ನಮ್ಮ ಸಂಸ್ಥೆಗೆ ಅವರು ಸಲ್ಲಿಸಿದ ಸೇವೆ ಉಲ್ಲೇಖನೀಯ ಎಂದರು. ಕಾಲೇಜಿನ ಉಪ-ಪ್ರಾಂಶುಪಾಲ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಾಸ್ತಾವಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ ಸನ್ಮಾನ ಪತ್ರ ವಾಚಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ವೀಣಾ ಭಟ್, ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಂದಾ ರೈ ಹಾಗೂ ಕಛೇರಿ ಸಿಬ್ಬಂದಿ ಶ್ರೀ ಸುಧೀಂದ್ರ ಕೆ.ಎಸ್. ಸನ್ಮಾನಿತರ ಕುರಿತು ಅಭಿಪ್ರಾಯ ಹಂಚಿಕೊAಡರು. ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ದೀಪಿಕಾ ಜಿ. ಪ್ರಾರ್ಥಿಸಿ, ಗಣಕ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಶ್ರೀ ಹರೀಶ್ ಕಾಂಚನ್ ವಂದಿಸಿ, ಗಣಿತಶಾಸ್ತ್ರ ಪ್ರಾಧ್ಯಾಪಕಿ ನಿರ್ಮಲ ಕಾರ್ಯಕ್ರಮ ನಿರೂಪಿಸಿದರು.