Home » ಬಿ ಬಿ ಹೆಗ್ಡೆ ಕಾಲೇಜು : 76ನೇ ಗಣರಾಜ್ಯೋತ್ಸವ
 

ಬಿ ಬಿ ಹೆಗ್ಡೆ ಕಾಲೇಜು : 76ನೇ ಗಣರಾಜ್ಯೋತ್ಸವ

by Kundapur Xpress
Spread the love

ಕುಂದಾಪುರ : ದೇಶದ ಅಭಿವೃದ್ಧಿ ಜನರ ಏಕತೆ ಮತ್ತು ದೇಶಾಭಿಮಾನದಿಂದ ಸಾಧ್ಯ. ವಿದ್ಯಾರ್ಥಿಗಳಲ್ಲಿ ಆ ಭಾವನೆ ಮೂಡುವ ಮುಖೇನ ಸದೃಢ ರಾಷ್ಟ್ರ ನಿರ್ಮಾಣವಾಗಬೇಕು ಎಂದು ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಶ್ರೀ ಬಿ. ಎಮ್. ಸುಕುಮಾರ ಶೆಟ್ಟಿಯವರು ಹೇಳಿದರು.
ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ 76ನೇ ಗಣರಾಜ್ಯೋತ್ಸವದ ಫಥ ಸಂಚಲನದ ಗೌರವವನ್ನು ಸ್ವೀಕರಿಸಿ, ಧ್ವಜಾರೋಹಣ ಮಾಡಿ ಮಾತನಾಡಿದರು. ಈ ಸಂದರ್ಭ ಭಾರತೀಯ ಸೇನೆಯ ನಿವೃತ್ತ ಸೈನಿಕ ಶ್ರೀ ರಾಘವ ಖಾರ್ವಿ ಅವರನ್ನು ಸನ್ಮಾನಿಸಲಾಯಿತು. ಕಾಲೇಜಿನ ಗವರ್ನಿಂಗ್ ಕೌನ್ಸಿಲ್ ಸದಸ್ಯರಾದ ಶ್ರೀ ಹುಂತ್ರಿಕೆ ಸುಧಾಕರ್ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲ ಡಾ| ಚೇತನ್ ಶೆಟ್ಟಿ ಕೋವಾಡಿ, ಎನ್.ಸಿ.ಸಿ. ಅಧಿಕಾರಿಗಳಾದ ಲೆಫ್ಟಿನೆಂಟ್ ಹರೀಶ್ ಬಿ., ಎ.ಎನ್.ಓ, ಶ್ರೀ ಶರತ್ ಕುಮಾರ್, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕನ್ನಡ ವಿಭಾಗದ ಉಪನ್ಯಾಸಕಿ ಶ್ರೀಮತಿ ರೇಷ್ಮಾ ಶೆಟ್ಟಿ ಸ್ವಾಗತಿಸಿ, ವಂದಿಸಿ, ನಿರೂಪಿಸಿದರು.

 

Related Articles

error: Content is protected !!