ಬ್ರಹ್ಮಾವರ : ಸೇವೆ ಮತ್ತು ಸ್ವಾತಂತ್ರ್ಯ ಈ ಎರಡು ಪರಿಕಲ್ಪನೆಗಳ ನೈಜ ಅರ್ಥವನ್ನು ಸ್ವಯಂಸೇವಕರು ಅರಿತುಕೊಳ್ಳಬೇಕು. ಸಾಹಿತ್ಯದ ಜೀವಾಳವೇ ಜೀವನ. ಬದುಕಿನ ಉದ್ದೇಶವನ್ನು ಸಾಹಿತ್ಯ ಕಟ್ಟಿ ಕೊಡುತ್ತದೆ. ವಿದ್ಯಾರ್ಥಿಗಳು ಬದುಕಿನಲ್ಲಿ ಸಮರ್ಪಣ ಮನೋಭಾವ, ಶ್ರಮದ ವ್ಯಕ್ತಿತ್ವವನ್ನು ಮೈಗೂಡಿಸಿಕೊಳ್ಳಬೇಕು. ನಿರಂತರವಾದ ಸಾಹಿತ್ಯ ಓದಿನಲ್ಲಿ ತೊಡಗಿಕೊಳ್ಳುವ ಮೂಲಕ, ಮೌಲ್ಯಯುತ ಜೀವನವನ್ನು ಕಟ್ಟಿಕೊಳ್ಳಿ ಎಂದು ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರೊಫೆಸರ್ ಡಾ| ರವಿರಾಜ್ ಶೆಟ್ಟಿ ಹೇಳಿದರು.
ಅವರು ವಡ್ಡರ್ಸೆಯಲ್ಲಿ ನಡೆಯುತ್ತಿರುವ ಕುಂದಾಪುರದ ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವಾರ್ಷಿಕ ವಿಶೇಷ ಶಿಬಿರದಲ್ಲಿ ಶೈಕ್ಷಣಿಕ ಕಾರ್ಯಕ್ರಮದ ಭಾಗವಾಗಿ ಸಾಹಿತ್ಯ ಮತ್ತು ಜೀವನ ಮೌಲ್ಯ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿ ಮಾತನಾಡಿದರು.
ನಿವೃತ್ತ ವಿಜಯ ಬ್ಯಾಂಕ್ ಅಧಿಕಾರಿ ಪ್ರಶಾಂತ್ ಶೆಟ್ಟಿ ವಡ್ಡರ್ಸೆ ಅಧ್ಯಕ್ಷತೆ ವಹಿಸಿದ್ದರು, ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೊತ್ತಾಡಿ ಉಮೇಶ್ ಶೆಟ್ಟಿ ಶುಭ ಹಾರೈಸಿದರು.
ಈ ಸಂದರ್ಭ ಮಾಜಿ ಗ್ರಾಮ ಪಂಚಾಯತ್ ಸದಸ್ಯ ಜಯಕರ ಶೆಟ್ಟಿ, ಬ್ರಹ್ಮಾವರ ನಂದ ಸ್ಟುಡಿಯೋದ ವಿಚಿತ್ರ ಕುಮಾರ್ ಶೆಟ್ಟಿ, ಸರ್ಕಾರಿ ಪ್ರೌಢಶಾಲೆ ಗೋಪಾಡಿಯ ಮುಖ್ಯ ಶಿಕ್ಷಕ ಮಹೇಶ್ ಚಂದ್ರ ಶೆಟ್ಟಿ, ಶಿರಿಯಾರದ ಗ್ರಾಮ ಆಡಳಿತ ಅಧಿಕಾರಿ ಶರತ್ ಕುಮಾರ್ ಶೆಟ್ಟಿ ಬನ್ನಾಡಿ, ಉದ್ಯಮಿ ಅಜಿತ್ ಕುಮಾರ್ ಶೆಟ್ಟಿ ಕೊತ್ತಾಡಿ, ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಅರುಣ ಹೊಳ್ಳ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನ ಸಮಿತಿಯ ಸದಸ್ಯೆ ಸುಮತಿ ಎನ್. ಆಚಾರ್, ಇಂಜಿನಿಯರ್ ಗೌತಮ್ ಶೆಟ್ಟಿ ವಡ್ಡರ್ಸೆ, ಕಾಲೇಜಿನ ಗಣಿತಶಾಸ್ತ್ರ ಪ್ರಾಧ್ಯಾಪಕಿ ನಿರ್ಮಲ ಬಿಲ್ಲವ, ಗಣಕ ವಿಜ್ಞಾನ ಪ್ರಾಧ್ಯಾಪಕ ಪ್ರಣಮ್ ಆರ್. ಬೆಟ್ರಬೆಟ್ಟು , ಎನ್. ಎಸ್. ಎಸ್. ಶಿಬಿರಾಧಿಕಾರಿ ದೀಪಾ ಪೂಜಾರಿ ಉಪಸ್ಥಿತರಿದ್ದರು.
ಕಾಲೇಜಿನ ಉಪ-ಪ್ರಾಂಶುಪಾಲ ಹಾಗೂ ಎನ್.ಎಸ್.ಎಸ್. ಶಿಬಿರಾಧಿಕಾರಿ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಸ್ತಾವಿಸಿದರು.
ಸ್ವಯಂಸೇವಕರಾದ ರಶ್ಮಿತಾ ಸ್ವಾಗತಿಸಿ, ಶುಭ ಅತಿಥಿಗಳನ್ನು ಪರಿಚಯಿಸಿ, ಸ್ಮಿತಾ ವಂದಿಸಿ, ಶರಣ್ಯ ಕಾರ್ಯಕ್ರಮ ನಿರೂಪಿಸಿದರು.
![](https://kundapurxpress.com/wp-content/uploads/2025/02/WhatsApp-Image-2025-02-05-at-12.29.39-PM.jpeg)
![](https://kundapurxpress.com/wp-content/uploads/2024/11/IMG-20241128-WA0000.jpg)