Home ಕರಾವಳಿ ಸುದ್ದಿಬಿ. ಬಿ. ಹೆಗ್ಡೆ ಕಾಲೇಜು : “ದೇಶದ ಪ್ರಗತಿಯಲ್ಲಿ ಯುವಜನತೆಯ ಪಾತ್ರ” ಕುರಿತು ವಿಶೇಷ ಉಪನ್ಯಾಸ

ಬಿ. ಬಿ. ಹೆಗ್ಡೆ ಕಾಲೇಜು : “ದೇಶದ ಪ್ರಗತಿಯಲ್ಲಿ ಯುವಜನತೆಯ ಪಾತ್ರ” ಕುರಿತು ವಿಶೇಷ ಉಪನ್ಯಾಸ

"B. B. Hegde College: Special lecture on 'Role of Youth in Nation's Progress'"

by Kundapur Xpress

ಕುಂದಾಪುರ : ದೇಶದ ಅಭಿವೃದ್ಧಿ ಹಾಗೂ ಸಾಮಾಜಿಕ ಪರಿವರ್ತನೆಯಲ್ಲಿ ಯುವಜನತೆ ಪಾತ್ರ ಅತ್ಯಂತ ಮಹತ್ವದ್ದು. ಯುವಜನತೆ ತಮ್ಮಲ್ಲಿರುವ ಜ್ಞಾನ, ಪ್ರತಿಭೆ, ಸೃಜನಶೀಲತೆ ಹಾಗೂ ತಂತ್ರಜ್ಞಾನದ ಕೌಶಲ್ಯಗಳನ್ನು ಸಮಾಜದ ಒಳಿತಿಗಾಗಿ ಬಳಸಬೇಕು. ಮಾದಕ ವ್ಯಸನಗಳಿಂದ ದೂರವಿದ್ದು ಉತ್ತಮ ಚಿಂತನೆ, ಕಠಿಣ ಪರಿಶ್ರಮ ಮತ್ತು ಸತತ ಕಲಿಕೆಯ ಮೂಲಕ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಕುಂದಾಪುರದ ಹಿರಿಯ ನ್ಯಾಯವಾದಿ ಟಿ.ಬಿ. ಶೆಟ್ಟಿ ಹೇಳಿದರು

ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ, ರೋಟರಿ ಕ್ಲಬ್ ಕುಂದಾಪುರ ಮತ್ತು ರೋಟರ್ಯಾಕ್ಟ್ ಕ್ಲಬ್ ನ ಜಂಟಿ ಆಶ್ರಯದಲ್ಲಿ ಆಯೋಜಿಸಿದ ‌ʼಪ್ರಸ್ತುತ ಕಾಲಘಟ್ಟದಲ್ಲಿ ಯುವಜನತೆಯ ಪಾತ್ರʼ ಎನ್ನುವ ಕುರಿತು ಅರಿವು ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪಾರ್ವತಿ ಮತ್ತು ಆನಗಳ್ಳಿ ಮಹಾಲಿಂಗ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನ ಕಾರ್ಯದರ್ಶಿ ವಿಶ್ವನಾಥ್ ಶೆಟ್ಟಿ, ರೋಟರಿ ಕ್ಲಬ್ ಕುಂದಾಪುರದ ಉಪಾಧ್ಯಕ್ಷ ಮನೋಜ್‌ ನಾಯರ್, ಕಾರ್ಯದರ್ಶಿ ಅಶೋಕ್ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷ ವೆಂಕಟೇಶ್‌ ನಾವುಂದ, ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆಯ ಮುತ್ತಯ್ಯ ಶೆಟ್ಟಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಕಾಲೇಜಿನ ಉಪ-ಪ್ರಾಂಶುಪಾಲ ಡಾ ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ಆಡಳಿತ ನಿಕಾಯಕ ಮತ್ತು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀ ರಕ್ಷಿತ್‌ ರಾವ್‌ ಗುಜ್ಜಾಡಿ ಸ್ವಾಗತಿಸಿದರು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಪ್ರವೀಣಾ ಎಮ್. ಪೂಜಾರಿ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

Related Articles

Leave a Comment

This site uses Akismet to reduce spam. Learn how your comment data is processed.