ಕೋಟ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕುಂದಾಪುರ ತಾಲೂಕಿನ ತೆಕ್ಕಟ್ಟೆ ವಲಯದ ಬೇಳೂರು.ಬಿ ಒಕ್ಕೂಟದ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಬೇಳೂರಿನ ದೇಲಟ್ಟು ನಾಗಯಕ್ಷಿ ದೇಗುಲವನ್ನು ಸ್ಥಳೀಯ ತಂಡದ ಸದಸ್ಯರು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಹಾಗೂ ದೇವಸ್ಥಾನ ಸಮಿತಿ ಸದಸ್ಯರು ಮತ್ತು ಒಕ್ಕೂಟದ ಪದಾಧಿಕಾರಿಗಳು ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ನಡೆಯಿತು.