ಉಡುಪಿ : ಬಿಜೆಪಿಯ ಉಡುಪಿ ಜಿಲ್ಲಾ ನೂತನ ಅಧ್ಯಕ್ಷರಾಗಿ ನಿಯೋ ಜನೆಗೊಂಡಿರುವ ಕಿಶೋರ್ ಕುಮಾರ್ ಕುಂದಾಪುರ ಇವರು ಸೋಮವಾರ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜರುಗಿದ ಸಮಾರಂಭದಲ್ಲಿ ಜಿಲ್ಲಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ನಿಕಟಪೂರ್ವ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೂಗುಚ್ಛ ಕೊಟ್ಟು ಸ್ವಾಗತಿಸಿದ ಬಳಿಕ ಪಕ್ಷದ ಧ್ವಜವನ್ನು ನೂತನ ಜಿಲ್ಲಾಧ್ಯಕ್ಷರಿಗೆ ಹಸ್ತಾಂತರ ಮಾಡಿದರು
ನೂತನ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಬಿಜೆಪಿ ಪಕ್ಷ ಸಂಘಟನೆಗೆ ಇನ್ನಷ್ಟು ಹೆಚ್ಚಿನ ಆದ್ಯತೆ ನೀಡಲಾ ಗುವುದು. ಮುಂದಿನ ತಾಪಂ, ಜಿಪಂ, ಲೋಕಸಭೆ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲಾಗುವುದು ಎಂದರು.
ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ, ಕಿರಣ್ ಕುಮಾರ್ ಕೊಡ್ಡಿ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಮಂಗಳೂರು ವಿಭಾಗೀಯ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ಮುಖಂಡ ಮನೋಹರ್ ಎಸ್. ಕಲ್ಮಾಡಿ ಎನ್ ಶಿವಕುಮಾರ್ ಉಪಸ್ಥಿತರಿದ್ದರು