ಕುಂದಾಪುರ : ಕುಂದಾಪುರ ನಗರ ಬಿಜೆಪಿ ಮಹಾಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಬಿಜೆಪಿಯ ಸದಸ್ಯತ್ವ ಕಾರ್ಯಗಾರ ಬಿಜೆಪಿ ಕಾರ್ಯಾಲಯದಲ್ಲಿ ನೆರವೇರಿತು.ಸದಸ್ಯತ್ವ ಕಾರ್ಯಗಾರದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಮಾತನಾಡಿ ಆದಷ್ಟು ಶೀಘ್ರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನದ ಕಾರ್ಯಗಾರ ನಡೆಸಿ ಸಕ್ರಿಯ ಕಾರ್ಯಕರ್ತರ ನೊಂದಾವಣಿ ಮಾಡುವಂತೆ ಕರೆ ನೀಡಿದರು.ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ವಿಕಸಿತ ಭಾರತ ನಿರ್ಮಾಣದ ಸಂಕಲ್ಪ ಸಾಕಾರಗೊಳಿಸಲು ಈ ಅಭಿಯಾನಕ್ಕೆ ಎಲ್ಲರೂ ಕೈ ಜೋಡಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬಿಜೆಪಿ ಕುಂದಾಪುರ ಕ್ಷೇತ್ರ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಅವರು ಮಾತನಾಡಿ ಕುಂದಾಪುರ ಪುರಸಭೆ ವಾರ್ಡ್ ನ ಪ್ರತಿ ಮನೆ ಮನೆಗೆ ಭೇಟಿ ನೀಡಿ ಬಿಜೆಪಿ ಪಕ್ಷದ ಕಾರ್ಯಕರ್ತರನ್ನು ಪಕ್ಷದ ಸದಸ್ಯತ್ವ ನೊಂದಾಯಿಸುವಂತೆ ವಿನಂತಿಸಿದರು.ಅಭಿಯಾನದ ಈ ಕಾರ್ಯಕ್ರಮದ ವೇದಿಕೆಯಲ್ಲಿ ಕುಂದಾಪುರ ಮಂಡಲ ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ,ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ,,ಸುಧೀರ್.ಕೆ.ಎಸ್.ಕುಂದಾಪುರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ಕಡ್ಗಿ, ಅಭಿಯಾನದ ಸಹ ಸಂಚಾಲಕ ಸದಾನಂದ ಬಳ್ಕೂರು,ರಾಜೇಶ್ ಶೆಟ್ಟಿ ಕುಂದಾಪುರ ಪುರಸಭಾ ಅಧ್ಯಕ್ಷ ಮೋಹನ್ ದಾಸ್ ಶೆಣೈ, ಉಪಾಧ್ಯಕ್ಷೆ ಶ್ರೀಮತಿ ವನಿತಾ ಬಿಲ್ಲವ, ಉಪಸಿತರಿದ್ದರು.ಹಾಗೂ ಈ ಕಾರ್ಯಕ್ರಮದಲ್ಲಿ ಕುಂದಾಪುರ ಬಿಜೆಪಿ ನಗರ ಮಹಾಶಕ್ತಿ ಕೇಂದ್ರದ ಪದಾಧಿಕಾರಿಗಳು, ಕುಂದಾಪುರ ಪುರಸಭ ಸದಸ್ಯರು,ಕುಂದಾಪುರ ಮಂಡಲದ ಪದಾಧಿಕಾರಿಗಳು,ಪಕ್ಷದ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.