ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಸದಸ್ಯ ಹಾಗೂ ಹಿರಿಯ ರಾಜಕಾರಣಿ ಬಿ.ಎನ್.ಬಚ್ಚೇಗೌಡರವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಮೂರು ದಿನಗಳ ಹಿಂದೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಹೆಸರಿನಲ್ಲಿ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪಕ್ಷದ ಕಚೇರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಸ್ವ-ಇಚ್ಛೆಯಿಂದ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀ ನಾಮೆ ಸಲ್ಲಿಸುತ್ತಿದ್ದೇನೆ. ರಾಜೀನಾಮೆ ಅಂಗೀಕರಿಸಬೇಕು ಎಂದು ಕೋರುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ