ಬೈಂದೂರು : ಸಂಸದ ಬಿ. ವೈ.ರಾಘವೇಂದ್ರ ಅವರು ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗ ಮಂಜೂರಾತಿಗೆ ಮನವಿ ಮಾಡಿದರು.
ಒಂದು ದಶಕದ ಹಿಂದೆ ಮಲೆನಾಡು ಕರಾವಳಿ ಸಂಪರ್ಕಿಸುವ ಈ ಯೋಜನೆಯ ಸಮೀಕ್ಷೆಗೆ ಮಂಜೂರಾತಿ ನೀಡಲಾಗಿತ್ತು. ಆದರೆ, ನಂತರ ಈ ಯೋಜನೆಯನ್ನು ಸ್ಥಗಿತಗೊಳಿಸಲಾಯಿತು. ಈ ಉದ್ದೇಶಿತ ಯೋಜನೆಯು ಮಲೆನಾಡು ಪ್ರದೇಶದಿಂದ ಕರಾವಳಿ ಕರ್ನಾಟಕಕ್ಕೆ ಸಂಪರ್ಕವನ್ನು ಒದಗಿಸಲು ಸಹಾಯ ಮಾಡುತ್ತದೆ. ಹೀಗಾಗಿ ಮುಂಬರುವ ಕೇಂದ್ರ ಬಜೆಟ್‌ನಲ್ಲಿ ಈ ಯೋಜನೆಗೆ ಮಂಜೂರಾತಿ ನೀಡುವಂತೆ ಸಂಸದರು ಮನವಿ ಮಾಡಿದ್ದಾರೆ.
1. ಬೈಂದೂರಿನ ಮೂಕಾಂಬಿಕಾ ರೈಲು ನಿಲ್ದಾಣದಲ್ಲಿ ರೈಲುಗಳ ನಿಲುಗಡೆ
ಉಡುಪಿ ಜಿಲ್ಲೆಯ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನವು ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕೇಂದ್ರಗಳಲ್ಲಿ ಒಂದಾಗಿರುವುದರಿಂದ, ಮೂಕಾಂಬಿಕಾ ರಸ್ತೆ ಬೈಂದೂರು ರೈಲು ನಿಲ್ದಾಣವು ಯಾತ್ರಾರ್ಥಿಗಳಿಗೆ ದೇವಸ್ಥಾನವನ್ನು ತಲುಪಲು ಸೇವೆ ಸಲ್ಲಿಸುವ ರೈಲು ನಿಲ್ದಾಣವಾಗಿದೆ. ಮುಖ್ಯವಾಗಿ ಕೇರಳ ಮತ್ತು ತಮಿಳುನಾಡಿನಿಂದ ಪ್ರತಿದಿನ 10,000 ಕ್ಕೂ ಹೆಚ್ಚು ಯಾತ್ರಾರ್ಥಿಗಳು ಈ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಹಾಗಾಗಿ ರೈಲು ಸಂಖ್ಯೆ. 22629/22630 ದಾದರ್ ಸೆಂಟ್ರಲ್-ತಿರುನೆಲ್ವೇಲಿ-ದಾದರ್ ಸೆಂಟ್ರಲ್ ಎಕ್ಸಪ್ರೆಸ್ (ಸಾಪ್ತಾಹಿಕ) ಮತ್ತು ರೈಲು ಸಂಖ್ಯೆ: 12617/12618 ಎರ್ನಾಕುಲಂ-ಹಜರತ್ ನಿಜಾಮುದ್ದೀನ್- ಎರ್ನಾಕುಲಂ ಮಂಗಳಾ ಲಕ್ಷದ್ವೀಪ್ ಎಕ್ಸ್‌ಪ್ರೆಸ್ (ಕೆ.ಆರ್.ಸಿ.ಎಲ್ ಡೈಲಿ ಕೂಡ) ನಿಲುಗಡೆಯನ್ನು ಮಂಜೂರು ಮಾಡುವಂತೆ ನಾನು ವಿನಂತಿಸುತ್ತೇನೆ. ಈ ರೈಲುಗಳಿಗೂ ಮೂಕಾಂಬಿಕಾ ನಿಲ್ದಾಣದಲ್ಲಿ ನಿಲುಗಡೆ ನೀಡಲು ಕೊಂಕಣ ರೈಲ್ವೆ ಮಂಡಳಿಯು ರೈಲ್ವೆ ಮಂಡಳಿಗೆ ಶಿಫಾರಸ್ಸನ್ನು ಸಹ ಮಾಡಿದೆ.
2. ಉಡುಪಿ ಜಿಲ್ಲೆ ಸೇನಾಪುರ ರೈಲು ನಿಲ್ದಾಣದಲ್ಲಿ ರೈಲುಗಳ ನಿಲುಗಡೆ
ಸೇನಾಪುರ ರೈಲು ನಿಲ್ದಾಣವು ಉಡುಪಿ ಜಿಲ್ಲೆಯ ಪ್ರಮುಖ ರೈಲು ನಿಲ್ದಾಣವಾಗಿದ್ದು, ಸುತ್ತಮುತ್ತಲಿನ ಜನರು ಸೇನಾಪುರದಿಂದ ದೂರದಲ್ಲಿರುವ ಮೂಕಾಂಬಿಕಾ ರಸ್ತೆ ಅಥವಾ ಕುಂದಾಪುರ ರೈಲು ನಿಲ್ದಾಣದಲ್ಲಿ ರೈಲುಗಳನ್ನು ಹತ್ತುವ ಮೂಲಕ ಬೆಂಗಳೂರು, ಮುಂಬೈಗೆ ಪ್ರಯಾಣಿಸುತ್ತಿದ್ದಾರೆ. ಆದ್ದರಿಂದ ಸೇನಾಪುರ ರೈಲು ನಿಲ್ದಾಣದಲ್ಲಿ ಮಂಗಳೂರು ಮತ್ತು ಮುಂಬೈ ನಡುವೆ ಸಂಚರಿಸುವ ರೈಲು ಸಂಖ್ಯೆ:12619/20 ಮತ್ಸಗಂದ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್‌ಗೆ ಹಾಗೂ ಮತ್ತು ಕಾರವಾರ ಮತ್ತು ಬೆಂಗಳೂರು ನಡುವೆ ಸಂಚರಿಸುವ ರೈಲು ಸಂಖ್ಯೆ:16595/96 ಪಂಚಗಂಗಾ ಎಕ್ಸ್‌ಪ್ರೆಸ್ ರೈಲಿಗೆ ಸೇನಾಪುರದಲ್ಲಿ ನಿಲುಗಡೆ ಒದಗಿಸುವಂತೆ ಸಹ ಇದೇ ಸಂದರ್ಭದಲ್ಲಿ ಸಚಿವರನ್ನು ವಿನಂತಿಸಿಕೊಳ್ಳಲಾಯಿತು.
ಮನವಿಯ ಬಗ್ಗೆ ಕೇಂದ್ರ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿದ್ದು, ಆದಷ್ಟು ಬೇಗನೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿರುತ್ತಾರೆ