ಹಾಸನ: ಬಂಡಾಯವಾಗಿ ನಾಮಪತ್ರ ಸಲ್ಲಿಸಿರುವ ಕೆ.ಎಸ್. ಈಶ್ವರಪ್ಪ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಹೊಳೆನರಸೀಪುರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರು ಎಷ್ಟೆಷ್ಟು ಮಾಡುತ್ತಾರೋ ಅದಕ್ಕೆ ದುಪ್ಪಟ್ಟು ಮತಗಳು ನಮ್ಮ ಅಭ್ಯರ್ಥಿ ರಾಘವೇಂದ್ರ ಅವರಿಗೆ ಬೀಳುತ್ತವೆ. ಅಲ್ಲಿನ ಜನರು ಪುಕ್ಕಟೆ ಮಾತುಗಳನ್ನು ಗಮನಿಸುತ್ತಿದ್ದು ಅವರಿಗೆ ತಕ್ಕ ಪಾಠ ಕಲಿಸುತ್ತಾರೆ. ಈಶ್ವರಪ್ಪ ಅವರು ಮುಖ್ಯಮಂತ್ರಿ, ಡಿಸಿಎಂ ಆಗಿದ್ದಾಗ ಶಿವಮೊಗ್ಗಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ. ಬಿಎಸ್ ವೈ. ರಾಘವೇಂದ್ರ ಅವರ ಅಭಿವೃದ್ಧಿ ಕೆಲಸಗಳೇನು ಎನ್ನುವುದನ್ನು ಮನೆ ಮನೆಯಲ್ಲೂ ಮಾತನಾಡಿಕೊಳ್ಳುತ್ತಿದ್ದಾರೆ ಎಂದರು