ಬೆಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ನಾಳೆ ನಡೆಯಲಿದ್ದು, ಈ ಐತಿಹಾಸಿಕ ಘಳಿಗೆ ಅನುಭವಿಸಲು ಅನುಕೂಲವಾಗುವಂತೆ ಸೋಮವಾರ ರಜೆ ಘೋಷಿಸ ಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು. ಅಯೋಧ್ಯೆಯಲ್ಲಿ ಪ್ರಭು ಶ್ರೀ ರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆ ಘಳಿಗೆ ಬಗ್ಗೆ ರಾಮಭಕ್ತರಷ್ಟೇ ಅಲ್ಲ, ಇಡೀ ಜಗತ್ತಿನ ಅನೇಕ ದೇಶಗಳಲ್ಲೂ ಉತ್ಸಾಹ ಕಾಣುತ್ತಿದೆ. ಹೀಗಾಗಿ ರಾಜ್ಯದಲ್ಲಿ ಸರಕಾರ ಮುನ್ನೆಚ್ಚರಿಕೆ ವಹಿಸಲಿ ಹಾಗೂ ರಜೆ ನೀಡಲಿ ಎಂದು ಅವರು ಒತ್ತಾಯಿಸಿದರು.