ತುಮಕೂರು : ಮಾಜಿ ಸಚಿವ ವಿ.ಸೋಮಣ್ಣ ಅವರು ತುಮಕೂರಿನಿಂದ ಲೋಕಸಭೆಗೆ ಸ್ಪರ್ಧೆ ಮಾಡಲು ಕೇಂದ್ರದ ವರಿಷ್ಠರು ಸೂಚಿಸಿದರೆ ನಮ್ಮದೇನು ಅಭ್ಯಂತರವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ತುಮಕೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮಣ್ಣನವರು ಹಿರಿಯರಿದ್ದಾರೆ. ಪಕ್ಷಕ್ಕಾಗಿ ಬಹಳಷ್ಟು ಕೊಡುಗೆ ನೀಡಿದ್ದಾರೆ. ಅವರ ಅನುಭವ ಪಕ್ಷಕ್ಕೆ ದೊಡ್ಡ ಮಟ್ಟದಲ್ಲಿ ನೆರವಾಗಲಿದೆ. ಅವರ ಸ್ಪರ್ಧೆ ಬಗ್ಗೆ ಪಕ್ಷ ಒಟ್ಟಾಗಿ ಕೂತು ಚರ್ಚೆ ಮಾಡಲಿದೆ. ರಾಜ್ಯದ 28 ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಕಾರ್ಯಕರ್ತರ පಭಿಪ್ರಾಯವನ್ನು ಸಂಗ್ರಹಿಸಿಯೇ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ. ತುಮಕೂರು ಜಿಲ್ಲೆಗೆ ಸೋಮಣ್ಣ ಸ್ಪರ್ಧಿಸುವ ವಿಚಾರವೂ ಸಹ ಕಾರ್ಯಕರ್ತರ ಅಭಿಪ್ರಾಯ ಸಂಗ್ರ ಹಿಸಿ ನಂತರ ತೀರ್ಮಾನ ಮಾಡಲಾಗುತ್ತದೆ ಎಂದು ತಿಳಿಸಿದರು.