ಮಂಗಳೂರು : ರಾಜ್ಯದಲ್ಲಿರೋದು ಬಡವರು ರೈತರು ದಲಿತ ವಿರೋಧಿ ಸರ್ಕಾರ ಭ್ರಷ್ಟಾಚಾರದ ಸರ್ಕಾರ ಎಂದು ಆರೋಪಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಎಲ್ಲ 28 ಸೀಟುಗಳನ್ನು ಬಿಜೆಪಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ
ನಗರದ ಹೊರವಲಯದ ಅಡ್ಯಾರ್ ಗಾರ್ಡನ್‌ನಲ್ಲಿ ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ನೂತನ ಅಧ್ಯಕ್ಷ ಸತೀಶ್ ಕುಂಪಲ ಅವರ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದರೂ ಸಂಕಷ್ಟದಲ್ಲಿರುವ ರೈತರಿಗೆ ಯಾವ ಸಹಾಯವನ್ನೂ ರಾಜ್ಯ ಸರ್ಕಾರ ಮಾಡಿಲ್ಲ. ಹಿಂದೆ ಯಡಿಯೂರಪ್ಪ ಸಿಎಂ ಆಗಿದ್ದಾಗ ಬರದಿಂದ ಸಂಕಷ್ಟದಲ್ಲಿದ್ದ ರೈತರ ಖಾತೆಗಳಿಗೆ 13 ಸಾವಿರ ರೂಪಾಯಿಗಳನ್ನು ಹಾಕಿದ್ದರು. ಪ್ರವಾಹ ಪರಿಸ್ಥಿತಿ ಇದ್ದಾಗ 5 ಲಕ್ಷ ರೂಪಾಯಿ ಪರಿಹಾರ ಒದಗಿಸಿದ್ದರು.