263
ಕುಂದಾಪುರ : ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರರವರ ಆಯ್ಕೆಯನ್ನು ಬಿಜೆಪಿ ಮಂಗಳೂರು ವಿಭಾಗ ಸಹ ಪ್ರಭಾರಿ ರಾಜೇಶ್ ಕಾವೇರಿ ಸ್ವಾಗತಿಸಿದ್ದಾರೆ.
ಬಿ.ವೈ. ವಿಜಯೇಂದ್ರರವರ ಆಯ್ಕೆ ಪಕ್ಷದ ಶಕ್ತಿಯನ್ನು ಇನ್ನಷ್ಟು ಗಟ್ಟಿಗೊಳಿಸಿದೆ. ಯುವ ನಾಯಕರಾಗಿ, ನೀಡಿದ ಜವಾಬ್ದಾರಿಯನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿ ಉತ್ತಮ ಫಲಿತಾಂಶ ದಾಖಲಿಸಿದ ಹಿರಿಮೆ ಬಿ.ವೈ. ವಿಜಯೇಂದ್ರ ಅವರಿಗಿದೆ. ಅವರ ನಾಯಕತ್ವದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಭರ್ಜರಿ ಗೆಲುವನ್ನು ದಾಖಲಿಸಲಿದೆ. ಬಿ.ವೈ. ವಿಜಯೇಂದ್ರ ರವರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಮಂಗಳೂರು ವಿಭಾಗ ಸಹ ಪ್ರಭಾರಿ ರಾಜೇಶ್ ಕಾವೇರಿ ತಿಳಿಸಿದ್ದಾರೆ

